karanatakaKoppal

ಸರ್ಕಾರಿ ಸಭೆ ಸಮಾರಂಭಗಳಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾದ ಸರ್ಕಾರ


ಬೆಂಗಳೂರು:ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ‌.

ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು.
ಇಂತಹ ಮಹತ್ವ ಪೂರ್ಣ ಆದೇಶವನ್ನು ಹೊರಡಿಸಿರುವ ಸರ್ಕಾರ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗಿದೆ, ಎಂದು ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply