Koppal

೨೦೨೧- ೨೦೨೨ ನೇ ಸಾಲಿನ ಡಿಪ್ಲೋಮಾ ಪ್ರವೇಶ ಪ್ರಾರಂಭ


ಕುಷ್ಟಗಿ:ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್, ಕುಷ್ಟಗಿ ಸಂಸ್ಥೆಯಲ್ಲಿ 2021-22 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗಗಳಿರುತ್ತವೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ 35% ಅಂಕ ಪಡೆದಿರಬೇಕು. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶವನ್ನು ನೇರವಾಗಿ ನೀಡಲಾಗುವುದು. ಪ್ರವೇಶ ಪಡೆಯಲು ಎಸ್.ಎಸ್.ಎಲ್.ಸಿ. ಮೂಲ ತಾತ್ಕಾಲಿಕ ಅಂಕಪಟ್ಟಿ ವರ್ಗಾವಣೆ ಪ್ರಮಾಣ ಪತ್ರ ಅಥವಾ ಎನ್.ಓ.ಸಿ., ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನಿಷ್ಟ 05 ವರ್ಷಗಳ ವ್ಯಾಸಂಗ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಿ ಪ್ರವೇಶ ಪಡೆಯಬಹುದು ಎಂದು ಪ್ರಾಚಾರ್ಯರು ತಿಳಿಸಿರುತ್ತಾರೆ. ಪ್ರಾಚಾರ್ಯರ ಮೊಬೈಲ್ ಸಂ: 9008442737 ಮತ್ತು ಕಛೇರಿ ಸಿಬ್ಬಂದಿ 9480465200 ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply