Koppal

ಕೊಪ್ಪಳ ಜಿಲ್ಲಾಡಳಿತದಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನವರ ಜಯಂತಿ ಆಚರಣೆ


ಕೊಪ್ಪಳ:ನಾಡಿನ ಸ್ವಾತಂತ್ರ‍್ಯಕ್ಕಾಗಿ ಕೆಚ್ಚೆದೆಯ ಹೋರಾಟ ನಡೆಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಸಂಗೊಳ್ಳಿ ರಾಯಣ್ಣನವರ ಜಯಂತಿಯನ್ನು ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್,ಸಂಸದರಾದ ಕರಡಿ ಸಂಗಣ್ಣ,ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್.ಪಾಟೀಲ್, ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಫೌಜಿಯಾ ತರನುಮ್, ಅಪರ ಜಿಲ್ಲಾಧಿಕಾರಿಗಳಾದ ಎಂ.ಪಿ ಮಾರುತಿ ಸೇರಿದಂತೆ ವಿವಿಧ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply