BallarykaranatakaKoppal

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಂದ ತುಂಗಾಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ


ಹೊಸಪೇಟೆ:(ವಿಜಯನಗರ),ಆ.17(ಕರ್ನಾಟಕ ವಾರ್ತೆ): ತುಂಗಾಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ತುಂಗಾಭದ್ರಾ ಜಲಾಶಯಕ್ಕೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ವಿಶೇಷ ಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ,ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ,
ಸಂಸದರಾದ ವೈ.ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ದಡೇಸೂಗುರ,ಪರಣ್ಣ ಮನಳ್ಳಿ, ವೆಂಕಟರಾವ ನಾಡಗೌಡ ಜತೆಗಿದ್ದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸಕಿಶೋರ ಸುರಳ್ಕರ, ಬಳ್ಳಾರಿ/ವಿಜಯನಗರ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಬಿ.ಗುಂಗೆ, ಮುಖ್ಯ ಅಭಿಯಂತರರಾದ ಕೃಷ್ಣಾಜೀ ಚೌಹಾಣ್,ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ನಾಲಾ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಪಿ.ಬಿ.ಪ್ರಕಾಶ್, ಕಾರ್ಯಪಾಲಕ ಅಭಿಯಂತರರಾದ ಕೆ.ಬಿ.ಹೆಚ್.ಶಿವಶಂಕರ್,ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಮತ್ತಿತರರು ಇದ್ದರು.
ನಂತರ ಅವರು ಮುನಿರಾಬಾದ್ ಗೆ ತೆರಳಿ ನೀರಾವರಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply