vijayapur

ಕೋವಿಡ್ ೧೯ ಮಾರ್ಗಸೂಚಿಗಳನ್ವಯ ಪಿ.ಯು.ಸಿ ಪರೀಕ್ಷೆ ನಡೆಸಲು ಸೂಚನೆ


ವಿಜಯಪುರ : ಆಗಸ್ಟ್ :: ಇದೇ ದಿನಾಂಕ ೧೯-೦೮-೨೦೨೧ ರಿಂದ ೩ – ೦೯ – ೨೦೨೧ ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-೧೯ ಮಾರ್ಗಸೂಚಿಗಳನ್ವಯ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಿದ್ದತಾ ಸಭೆ ನಡೆಸಿದ ಅವರು ಕೋವಿಡ್ ೧೯ ಮಾರ್ಗಸೂಚಿಯ ಅನುಸಾರವಾಗಿ ಪರೀಕ್ಷೆಗಳನ್ನು ನಡೆಸಲು ಸಿದ್ದತೆ ಮಾಡಿಕೊಳ್ಳಬೇಕು ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ ಧರಿಸುವಂತೆ ನೋಡಿಕೊಳ್ಳಲು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ೫ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ವಿಜಯಪುರ, ಮುದ್ದೇಬಿಹಾಳ, ಬಸವನಬಾಗೇವಾಡಿ, ಸಿಂದಗಿ ಹಾಗೂ ಇಂಡಿ ಈ ೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೭೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಲು ಸೂಚಿಸಿದ ಅವರು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ೧೯ ಲಕ್ಷಣಗಳಾದ ಶೀತ, ಕೆಮ್ಮು, ಜ್ವರ ಕಂಡುಬAದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೋಲಿಸ್ ಬಂದೋಬಸ್ತ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯು ನಕಲುಮುಕ್ತವಾಗಿ ನಡೆಸಬೇಕು ಮತ್ತು ಐ.ಐ.ಟಿ. ಮಾದರಿಯಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಗಳು ನಡೆಯಬೇಕು. ಕೇಂದ್ರದ ಮುಖ್ಯ ಅಧೀಕ್ಷಕರು ಮತ್ತು ಸಹ ಮುಖ್ಯ ಅಧೀಕ್ಷಕರು ಜಾಗೃಕತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತವಾದ ಬೆಂಚ್ ಮತ್ತು ಡೆಸ್ಕಗಳ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಿಕೊಳ್ಳಲು ಕ್ರಮವಹಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವಾಗ ಪ್ರವೇಶ ಪತ್ರ , ಗುರ್ತಿನ ಪತ್ರ ಪರಿಶೀಲಿಸಿ ಪ್ರವೇಶ ನೀಡಬೇಕು. ಪರೀಕ್ಷಾರ್ಥಿಗಳು ಹಾಗೂ ನಿಗದಿತ ಸಿಬ್ಬಂದಿಗಳು ಮಾತ್ರ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶವಿದ್ದು. ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳೆಲ್ಲರಿಗೂ ಗುರುತಿನ ಪತ್ರವನ್ನು ಮುಖ್ಯ ಅಧೀಕ್ಷಕರ ಸಹಿಯೊಂದಿಗೆ ಒದಗಿಸಬೇಕು ಎಂದು ತಿಳಿಸಿದರು.
ಪರೀಕ್ಷಾ ಕೊಠಡಿಯಲ್ಲಿ ಮೋಬೈಲ್ ಪೋನ್ / ಪೇಜರ್, ಕ್ಯಾಲಕುಲೇಟರ್ (ಸೈಂಟಿಫಿಕ್), ಇ-ಕ್ಯಾಮರಾ ಇತರೆ ಇಲೆಕ್ಟ್ರಾನಿಕ್ ಪರಿಕರಗಳನ್ನು ತರುವುದು / ಬಳಸುವುದನ್ನು ನಿಷೇಧಿಸಲಾಗಿದೆ. ಕೇಂದ್ರದ ಮುಖ್ಯ ಅಧೀಕ್ಷಕರು ಮೋಬೈಲ್ ಪೋನ್ ಅವಶ್ಯಕತೆ ಇದ್ದಾಗ ಬಳಸಲು ಅನುಮತಿ ನೀಡಲಾಗಿದ್ದು ಸಮೀಪದ ಝರಾಕ್ಸ್ ಸೆಂಟೆರ್‌ಗಳನ್ನು ಮುಚ್ಚಿಸ ಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ ಸಾರ್ವಜನಿಕರಿಗೆ ನಿಷೇಧವಿದ್ದು,ಈ ಕುರಿತು ತೀವ್ರ ನಿಗಾ ಇಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಉತ್ತರ ಪತ್ರಿಕೆ,ಪ್ರಶ್ನೆ ಪತ್ರಿಕೆ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷಾ ನಡೆಯುವ ಸಂದರ್ಭದಲ್ಲಿನ ಎಲ್ಲಾ ಕೊಠಡಿಗಳಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ. ಕ್ಯಾಮರಾಗಳ ದೃಶ್ಯಾವಳಿಗಳನ್ನು ಪೆನ್ ಡ್ರೈವ್‌ದಲ್ಲಿ ಶೇಖರಿಸಿಕೊಂಡು ಪ್ರತಿ ಪರೀಕ್ಷೆ ಮುಗಿದ ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಹಾಗೂ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮ ಅರಿಸಿದ್ದಿ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀ ಬಗಲಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply