ಕಿತ್ತೂರು ರಾಣಿ ಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

0

ಕೊಪ್ಪಳ ಜ.08 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2020-21 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆಯ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುವುದು. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುವ ವ್ಯಕ್ತಿಗಳು ಅರ್ಹರಾಗಿರುವದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಹಾಗೂ ಆಯ್ಕೆಗೆ ಸಂಬAಧಿಸಿದAತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ವೀರ ಮಹಿಳೆ ಪ್ರಶಸ್ತಿಗೆ 18 ರಿಂದ 45 ವಯೋಮಿತಿಯೊಳಗಿನ ಒಬ್ಬ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಧೈರ್ಯ, ಸಾಹಸದೊಂದಿಗೆ ಸಮಯ ಪ್ರಜ್ಞೆ ಮೆರೆದ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಲಾಗುವುದು. ಈ ಪ್ರಶಸ್ತಿ ಪಡೆಯುವ ಮಹಿಳೆಯು ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 1 ರಿಂದ ಡಿಸೆಂಬರ್.31 ರೊಳಗೆ ಇರಬೇಕು. ಈ ಪ್ರಶಸ್ತಿಗೆ ಸಂಬAಧಿಸಿದ ಮಹಿಳೆಯ ತಂದೆ, ತಾಯಿ ಹಾಗೂ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು. ಈ ಪ್ರಶಸ್ತಿಗೆ ಆಯ್ಕೆಯಾದ ಒಬ್ಬ ಮಹಿಳೆಗೆ ರಾಜ್ಯದ ವತಿಯಿಂದ ರೂ.25 ಸಾವಿರಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಜನವರಿ.30 ಕೊನೆಯ ದಿನವಾಗಿದೆ. ಪ್ರಶಸ್ತಿ ಪ್ರಧಾನವನ್ನು ಅಂತರ ರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಅಥವಾ ಸರಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು. ಪ್ರಶಸ್ತಿಯನ್ನು ಖುದ್ದಾಗಿ ಆಯ್ಕೆಯಾದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಸ್ಥೆಯ ಪದಾಧಿಕಾರಿಗಳು ಸ್ವೀಕರಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಚೇರಿಯನ್ನು ಸಂಪರ್ಕಿಸುವAತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

- Advertisement -

Leave A Reply

Your email address will not be published.