Belagavi

೨೦೨೦ ನೇ ಸಾಲಿನ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ: ಅರ್ಜಿ ಆಹ್ವಾನ


ಬೆಳಗಾವಿ,ಆ.೧೭: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಹಿರಿಯ ಕ್ರೀಡಾಪಟು (ತರಬೇತುದಾರರಿಗೆ) ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಗೆ ೨೦೨೦ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಸೆಪ್ಟೆಂಬರ್ ೧೫ರ ಒಳಗಾಗಿ ಸೇವಾಸಿಂಧು ಆನ್‌ಲೈನ್ ವೆಬ್‌ಸೈಟ್ hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಅಥವಾ ದೂರವಾಣಿ ಸಂಖ್ಯೆ ೦೮೩೧-೨೪೭೪೧೦೧ ಗೆ ಸಂಪರ್ಕಿಸಬಹುದು.


Leave a Reply