Belagavi

ಅ.೨೧ ರಂದು ಮುಖ್ಯಮಂತ್ರಿಗಳಿAದ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ


ವಿಜಯಪುರ :ಅ ೧೯.: ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಣೆಯಾದ ಪ್ರಯುಕ್ತ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತಿç ಸಾಗರದಲ್ಲಿ ದಿನಾಂಕ : ೨೧-೮-೨೦೨೧ ರಂದು ಶನಿವಾರ ಮುಂಜಾನೆ ೧೧-೦೦ ಗಂಟೆಗೆ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ನಡೆಯಲಿದೆ.
ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಲಿದ್ದಾರೆ. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಶಾಸಕರಾದ ಶಿವಾನಂದ ಪಾಟೀಲ ಅವರು ವಹಿಸಲಿದ್ದು, ಮಾನ್ಯ ಜಲ ಸಂಪನ್ಮೂಲ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಮಾನ್ಯ ಅರಣ್ಯ ಹಾಗೂ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ, ಮಾನ್ಯ ಮುಜರಾಯಿ, ಹಜ್ ಮತ್ತ ವಕ್ಫ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲೆಯ ಶಾಸಕರಾದ ಎ.ಎಸ್ ಪಾಟೀಲ ನಡಹಳ್ಳಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರಾದ ಎಂ.ಬಿ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ದೇವಾನಂದ ಚವ್ಹಾಣ, ಸೋಮನಗೌಡ ಪಾಟೀಲ, ಅರುಣ ಶಹಾಪೂರ, ಸುನೀಲಗೌಡ ಪಾಟೀಲ, ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಶೋಕ ಅಲ್ಲಾಪೂರ ಉಪಸ್ಥಿತರಿರಲಿದ್ದಾರೆ.
ಅದರಂತೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ, ಸಚಿವರಾದ ಮುರುಗೇಶ ನಿರಾಣಿ, ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ, ಶಾಸಕರಾದ ಸಿದ್ಧು ಸವದಿ, ಸಂಸದರಾದ ಪಿ.ಸಿ ಗದ್ದಿಗೌಡರ, ಶಾಸಕರಾದ ಆರ್.ಬಿ ತಿಮ್ಮಾಪೂರ, ಹಣಮಂತ ನಿರಾಣಿ, ವೀರಣ್ಣ ಚರಂತಿಮಠ ಸೇರಿದಂತೆ ಇತರ ಅಧಿಕಾರಿಗಳು, ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Leave a Reply