Belagavi

ಪರಿವರ್ತನೆ ಹರಿಕಾರ ಡಿ. ದೇವರಾಜ ಅರಸು ಅವರ ೧೦೬ನೇ ಜನ್ಮ ದಿನಾಚರಣೆ


ಬೈಲಹೊಂಗಲ- ಸ್ಥಳೀಯ ಪಟ್ಟಣ ಪಂಚಾಯತ ಸಭಾ ಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪುರಸಭೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ೧೦೬ ನೇ ಜಯಂತಿಯನ್ನು ಕೋವಿಡ್ ೧೯ £ಯಮಾನುಸಾರವಾಗಿ ಅರ್ಥಪೂರ್ಣವಾಗಿ ಸರಳವಾಗಿ ಆಚರಣೆ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಪರಿವರ್ತನೆ ಹರಿಕಾರ ಡಿ. ದೇವರಾಜ ಅರಸು ಅವರ ೧೦೬ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ ಸಾಮಾಜಿಕ ಸಮಾನತೆ ಹಿತದೃಷ್ಟಿಯಿಂದ ಕಡುಬಡವರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಿ ಬಡವರ ಶೋಷಿತರ ಸಮಗ್ರ ಅಭಿವೃದ್ಧಿ ಹರಿಕಾರ ನೊಂದವರ ನಂದಾದೀಪ ಧೀಮಂತ ನಾಯಕ ಕರ್ನಾಟಕ ಮಾಜಿ ಮುಖ್ಯಮಂತ್ರಿ ದಿ.ಡಿ ದೇವರಾಜ ಅರಸು ರವರು ಬದುಕಿನಲ್ಲಿ ಹೊಸ ಆಶಾಕಿರಣ ಮತ್ತು ಹೊಸ ಬದುಕಿನ ಆಶಾಕಿರಣ ಮೂಡಿಸಿದವರು.
ಸಾಮಾಜಿಕ ನ್ಯಾಯ ಒದಗಿಸಲು ಬಗರ ಹುಕುಂ ಸಾಗುವಳಿಕೆ ಪದ್ಧತಿ ಜಾರಿಗೆ ತಂದಿದ್ದು ಒಂದು ಐತಿಹಾಸಿಕ ಮತ್ತು ಕ್ರಾಂತಿಕಾರಿ £ರ್ಣಯವಾಗಿದೆ. ಇದರಿಂದ ದೀನ ದಲಿತರು, ಬಡವರು ಮತ್ತು ರೈತರಿಗೆ ಅನುಕೂಲವಾಗಿದೆ ಎಂದು ಹೇಳಿದರು. ಡಿ. ದೇವರಾಜ ಅರಸು ಅವರು ಬಡವರ ಪರವಾಗಿದ್ದರು. ಬಡತನ ರೇಖೆಗಿಂತ ಕೆಳಗಿನವರಿಗೆ ಮುಖ್ಯವಾಹಿ£ಗೆ ತಂದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸದೃಢಗೊಳಿಸುವ ಗುರಿ ಹೊಂದಿದ ಅವರು ಈ ರಾಜ್ಯದ, ಈ ದೇಶದ ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಎಂದೆAದಿಗೂ ಚಿರಸ್ಥಾಯಿಯಾಗಿದ್ದಾರೆ. ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ “ಮೌನಕ್ರಾಂತಿಯ ಹರಿಕಾರ’ ಅವರಾಗಿದ್ದಾರೆ ಎಂದು ಹೇಳಿದರು.
ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ ಡಿ. ದೇವರಾಜ ಅರಸು ಅವರು ಡಾ| ಬಿ.ಆರ್. ಅಂಬೇಡ್ಕರ್, ಮಹಾತ್ಮಾ ಗಾಂಧಿ?ಸೇರಿದAತೆ ಮತ್ತಿತರರ ಸಿದ್ಧಾಂತ ಮೈಗೂಡಿಸಿಕೊಂಡಿದ್ದರು. ವಿದ್ಯೆ ಕಲಿತು ಸಾಕಷ್ಟು ಜ್ಞಾನ ಪಡೆದ ಅವರು ಯಾವುದೇ ನೌಕರಿಗೆ ಹೋಗದೇ ತಮ್ಮ ಸ್ವಂತ ಗ್ರಾಮಕ್ಕೆ ಬಂದು ಕೃಷಿ ಕಾರ್ಯ ಕೈಗೊಂಡು ತಮ್ಮ ಗ್ರಾಮಕ್ಕೆ ಮಾದರಿಯಾಗುವ ಹಾಗೆ ಕೆಲಸ ಮಾಡಿದರು. ಬಡವರ ಸಮಸ್ಯೆಯನ್ನು ಮನೆಯಲ್ಲಿ ಕುಳಿತುಕೊಂಡು ಕೇಳಿ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಿದರು. ಮುಂದೆ ಒಂದು ದಿನ ಅವರು ಜನನಾಯಕರಾಗಿ ಹೊರಹೊಮ್ಮಿದರು ಎಂದು ಹೇಳಿದರು.
ದಿ. ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗದವರ ಧ್ವ£ಯಾಗಿದ್ದರು. ಹಿಂದುಳಿದ ವರ್ಗಗಳ ಜನರಿಗೆ ಏನಾದರೂ ಮಾಡಬೇಕು. ಎಲ್ಲರಿಗೂ ಸಮಬಾಳು ಸಮಪಾಲು £Ãಡುವುದು ಅವರ ಆಶಯವಾಗಿತ್ತು. ಅವರು ಭೂ ಕಂದಾಯ ಅಧಿ£ಯಮವನ್ನು ಸಹ ಜಾರಿಗೆ ತಂದರು.ಊಳುವವನೇ ಭೂ ಒಡೆಯ ಎಂದು ಘೋಷಣೆ ಮಾಡಿ, ಭೂಮಿಯನ್ನು ಬಡವರಿಗೆ ಹಂಚಿ ಸಾಮಾಜಿಕ ನ್ಯಾಯ ಒದಗಿಸಿದರಲ್ಲದೇ ಸೂರು ಇಲ್ಲದವರಿಗೆ ಸೂರು ಒದಗಿಸಿದರು. ವೃದ್ದಾಪ್ಯ ವೇತನ, ಅಂಗವಿಕಲರ ವೇತನ ಮತ್ತು ಹಿಂದುಳಿದ ವರ್ಗಗಳ £ರ್ದೇಶನಾಲಯ ಸಹ ಜಾರಿಗೆ ತಂದರು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಉಪವಿಭಾಗಧಿಕಾರಿ ಶಶಿಧರ ಬಗಲಿ, ತಾ ಪಂ ಕಾರ್ಯ£ರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ಉಪನ್ಯಾಸಕಿ ಸವಿತಾ ರೊಟ್ಟಿ, ತಹಶೀಲ್ದಾರ ಹಾಗೂ ದಿ ಡಿ ದೇವರಾಜ ಅರಸು ಉತ್ಸವ ಸಮಿತಿ ಅಧ್ಯಕ್ಷ ಬಸವರಾಜ ನಾಗರಾಳ, ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶಾಂತಾ ಮರಿಗೌಡರ, ಪುರಸಭೆ ಮುಖ್ಯಾಧಿಕಾರಿ ಕೆ ಆಯ್ ನಾಗನೂರ, ಜಿ ವಾಯ್ ಭರಮಣ್ಣವರ, ವಿಸ್ತಿರ್ಣಾಧಿಕಾರಿ ವಿ ಎಸ್ ಬೋಳತ್ತಿನ, ಜಿ ಪಿ ಮುದಕನಗೌಡರ, ಹಾಗೂ £ಲಯ ಪಾಲಕರು ವಿಧ್ಯಾರ್ಥಿಗಳು ಹಾಜರಿದ್ದರು.


Leave a Reply