Belagavi

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ “ಭಾವೈಕ್ಯ, ಸೌಹಾರ್ದದಿಂದ ಕಾರ್ಯನಿರ್ವಹಿಸುವ ಪ್ರತಿಜ್ಞೆ”


ಬೆಳಗಾವಿ, ಆ.೨೦: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಶುಕ್ರವಾರ (ಆ.೨೦) ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆಯನ್ನು ಬೋಧಿಸಿದರು.
ಮಾಜಿ ಪ್ರಧಾನಮಂತ್ರಿ ದಿ.ರಾಜೀವ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ಆಗಸ್ಟ್ ೨೦ ರಂದು ದೇಶದೆಲ್ಲೆಡೆ ಸದ್ಭಾವನಾ ದಿನಾಚರಣೆ ನಡೆಸಲಾಗುತ್ತಿದೆ.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲರೂ ಪ್ರತಿಜ್ಞೆಯನ್ನು ಮಾಡಿದರು.
– “ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲ ಭೇದಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ಮೀಡದೇ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡುತ್ತೇನೆ”-
ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೌರಿಶಂಕರ್, ಆಹಾರ, ನಾಗರಿಕ ಪೂರೈಕೆ ಮತ್ತು ನಾಗರಿಕ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ.ಕೊಡ್ಲಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಖಾನಾಪುರ ತಹಶಿಲ್ದಾರ ರೇಷ್ಮಾ ತಾಳಿಕೋಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Leave a Reply