Koppal

ಇಂದು ಶಾಲಾ-ಕಾಲೇಜುಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ರವರು ವಿವಿಧ ಶಾಲಾ ಕಾಲೇಜುಗಳಿಗೆ ಬೇಟಿ


ಕುಷ್ಟಗಿ:ಇಂದು ಕುಷ್ಟಗಿಯ ಡಿಗ್ರಿ ಕಾಲೇಜ್ ಮತ್ತು ಬಾಲಕಿಯರ ಪ್ರೌಢ ಶಾಲೆ ಹಾಗೂ ಕಂದಕೂರ ಗ್ರಾಮದ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,ಪರಸ್ಪರ ಸಾಮಾಜಿಕ ಅಂತರ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿ ಶಾಲಾ ಕಾಲೇಜುಗಳಿಗೆ ಬರುವಂತೆ ಹೇಳಿದರು.

ಕೊರೋನಾ ಮಹಾ ಮಾರಿಯಿಂದ ಹಲವಾರು ತಿಂಗಳುಗಳ ಕಾಲ ಶಾಲಾ ಕಾಲೇಜುಗಳು ಬಂದ್ ಆಗಿದ್ದವು .

ಬಹಳ ದಿನಗಳ ನಂತರ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿದ್ದು ಸಂತಸದ ವಿಷಯ ,ಈಗಾಗಲೇ ಓದುವ ಕೆಲವಿಷ್ಟು ಮಕ್ಕಳು ಕಲಿತ ವಿಧ್ಯೆಯನ್ನೆ ಮರೆತು ಹೋಗಿದ್ದಾರೆ. ಹಾಗಾಗಿ ಎಲ್ಲಾ ಕುಟುಂಬದ ಸದಸ್ಯರು ಓದುವ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಸರ್ಕಾರ ದ ಕೋವಿಡ್ ನಿಯಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿ ಕೊಳ್ಳಬೇಕು.ಮತ್ತು ಎಲ್ಲರೂ ಶಿಕ್ಷಣ ವಂತರಾಗಬೇಕು ಎಂದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply