Koppal

ಕೊಪ್ಪಳ ಲೋಕಸಭಾ ಕ್ಷೇತ್ರದ ವಿವಿಧ ಅಭಿವೃದ್ದಿಗಳಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಬೇಟಿಯಾದ ಜನಪ್ರತಿನಿಧಿಗಳು


ಬೆಂಗಳೂರು:ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಯಿತು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಕುರಿತು ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಬಳಿ ಬ್ರಿಜ್ ನಿರ್ಮಾಣ ಕಾಮಗಾರಿ ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರದ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಬೈಪಾಸ್ ರಸ್ತೆ ನಿರ್ಮಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್,ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ ದಡೇಸುಗೂರು ,ಅಮರೇಗೌಡ ಬಯ್ಯಾಪುರ, ಕುರಿ ಮತ್ತು ಉಣ್ಣೆ ನಿಗಮ ಅಧ್ಯಕ್ಷರಾದ ಶರಣು ತಳ್ಳಿಕೇರಿ ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply