Koppal

ಕುರಿ ಮತ್ತು ಉಣ್ಣೆ ನಿಗಮಕ್ಕೆ ಅಗತ್ಯವಿರುವ ವಿವಿಧ ಯೋಜನೆ ಗಳ ಬಗ್ಗೆ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ನಿಗಮದ ಅದ್ಯಕ್ಷ ಶರಣು ತಳ್ಳಿಕೇರಿ


ಬೆಂಗಳೂರು:ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹಕಛೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಕುರಿ ಮತ್ತು ಮೇಕೆಗಳ ಆಕಸ್ಮಿಕ ಮರಣಕ್ಕೆ ಪರಿಹಾರ ಧನ “ಅನುಗ್ರಹ ಯೋಜನೆ”ಯ ಹೊಸ ಅರ್ಜಿಗಳನ್ನು ಸ್ವೀಕರಿಸಲು ಸಂಬಂಧಿಸಿದವರಿಗೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಸಂಭಂದಪಟ್ಟವರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ್,ಕೊಪ್ಪಳ ಸಂಸದರಾದ ಶ್ರೀ ಸಂಗಣ್ಣ ಕರಡಿ,ಮಾಜಿ ಸಚಿವರಾದ ಶ್ರೀ ನಾಗಪ್ಪ ಸಾಲೋನಿ ,ಶಾಸಕರಾದ ಶ್ರೀ ಪರಣ್ಣ ಮನವಳ್ಳಿ, ಶ್ರೀ ಬಸವರಾಜ್ ದಡೆಸ್ಗೂರ್ ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply