Uncategorized

ನೋ ವ್ಯಾಕ್ಸಿನೇಷನ್‌, ನೋ ಪೆನ್ಷನ್ , ರೇಷನ್ ಆದೇಶಕ್ಕೆ ಡಿ.ಕೆ.ಶಿ ಆಕ್ರೋಶ


ಚಾಮರಾಜನಗರ:ನೋ ವ್ಯಾಕ್ಸಿನೇಷನ್‌ ನೋ ರೇಷನ್, ನೋ ಪೆನ್ಷನ್ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ‌ವ್ಯಕ್ತಪಡಿಸಿರುವ ಡಿ.ಕೆ.ಶಿ.
ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತೆ ಕೋವಿಡ್‌ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ.
ಆದರೆ, ಲಸಿಕೆ ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ?. ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ?.
ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಎಂದು ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು ಎಂದು ಹರಿಹಾಯ್ದಿದ್ದಾರೆ.
ಆಕ್ಸಿಜನ್‌ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್‌, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.


Leave a Reply