Koppal

ಸರ್ಕಾರದ ಮಾರ್ಗಸೂಚಿಗಳನ್ವಯ ಗಣೇಶ ಉತ್ಸವ ಆಚರಿಸಿ : ಸುರಳ್ಕರ್ ವಿಕಾಸ ಕಿಶೋರ್


ಕೊಪ್ಪಳ: ಕೋವಿಡ್-19 ಹಿನ್ನೆಲೆಯಲ್ಲಿ ಈ ವರ್ಷದ ಗಣೇಶ ಉತ್ಸವವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ವಯ ಸರಳವಾಗಿ ಆಚರಿಸುವಂತೆ ಎಲ್ಲಾ ಸಾರ್ವಜನಿಕರು ಸಹಕರಿಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಗೌರಿ-ಗಣೇಶ ಹಬ್ಬ (ಗಣೇಶ ಉತ್ಸವ) ಆಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣೇಶ ಉತ್ಸವ ಆಚರಿಸುವ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅವುಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಹೊಂದಿರಬೇಕು. ಹಾಗೂ ಎಲ್ಲರೂ ಮಾಸ್ಕ್ ಧರಿಸಬೇಕು. ಪೂಜೆ ಸಮಯದಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಿ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸಬಾರದು. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದು ಹಾಗೂ ಸಂಬಂಧ ಯಾವುದೇ ಡಿಜೆ ಸೌಂಡ್ ಸಿಸ್ಟಂ ಬಳಸಲು ಅನುಮತಿ ಇರುವುದಿಲ್ಲ. ಹಾಗಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮಂಡಳಿಯವರು ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡು ಹಾಗೂ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಬೇಕು ಎಂದರು.ಸರಳ ಶ್ರೀ ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರವು ಪರಿಷ್ಕೃತ ಮಾರ್ಗಸೂಚಿಗಳನ್ವಯ, ಶ್ರೀಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ನಾನದೂಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು ಅಥವಾ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನ ಮಾಡಲು ಮುನಿಸಿಪಲ್ ಕಾರ್ಪೋರೇಷನ್ 7 ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯ ಎಂದು ಹೇಳಿದರು.
ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸಬೇಕು. ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ. ಶ್ರೀಗಣೇಶ ಆಚರಣೆಯ ಆಯೋಜಕರು ಕೋವಿಡ್ -19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಶ್ರೀಗಣೇಶ ಆಚರಣೆಯ ಆಯೊಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಲಸಿಕೆ ಹಾಕಿಸಬೇಕು. ವ್ಯವಸ್ಥಾಪನಾ ಮಂಡಳಿವರು ಅಗತ್ಯ ಸ್ಥಳ ಗುರುತಿಸಿ ಜಿಲ್ಲಾಡಳಿತದಿಂದ ಕೊವೀಡ್ ಲಸಿಕೆ ಹಾಕಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೂರ್ವಾನುಮತಿ ಕಡ್ಡಾಯವಾಗಿದ್ದು, ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ತಹಶೀಲ್ದಾರ್ ಕಾರ್ಯಾಲಯ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಅಲ್ಲದೇ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಅನುಮತಿ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗುವುದು. 4 ಅಡಿ ಗಿಂತ ಎತ್ತರದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪ್ರತಿಷ್ಠಾಪನಾ ಮಂಡಳಿಯವರು ಮನವಿ ಸಲ್ಲಿಸಿದ್ದು, ಈ ವಿಷಯವನ್ನು ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಗಣೇಶ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ವಿದ್ಯುತ್ ಸಂಪರ್ಕ, ಅನುಮತಿ, ಭದ್ರತೆ, ಕೋವಿಡ್ ಲಸಿಕೆ ವ್ಯವಸ್ಥೆ ಕಲ್ಪಿಸಲು ಸಮಾಜದ ಮುಖಂಡರು ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನ್ನುಮ್ ಅವರು ಮಾತನಾಡಿ, ಶ್ರೀಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ನಾನಿಟೈಸರ್ ಹಾಗೂ ಥರ್ಮಲ್ ಸ್ಮಿನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು. ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಹಾಗೂ ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಕೂರಿತಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಅವರು ಮಾತನಾಡಿ, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರೀ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನಾ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರಿಂದ ಕೋವಿಡ್ ಪ್ರಕರಣಗಳು ಕೊಪ್ಪಳ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದಲ್ಲಿವೆ. ಆದ್ದರಿಂದ ಈ ವರ್ಷದ ಗಣೇಶ ಉತ್ಸವದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅಚ್ಚುಕಟ್ಟಾಗಿ ಪಾಲಿಸೋಣ ಎಂದರು.
ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿ ರಾಜು ಮಾತನಾಡಿ, ಈ ವರ್ಷದ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿಸಲು ಗಣೇಶ ಚರ್ಥುತಿಯಂದು ಅರಿಶಿನ ಪುಟ್ಟ ಗಣಪತಿ ಪೂಜಿಸೋಣ ಕೋವಿಡ್ ನಿವಾರಕ ಪರಿಸರ ಸ್ನೇಹಿ ಹಬ್ಬ ಆಚರಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಅರಿಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಾವು ತಯಾರಿಸಿದ ಅರಿಶಿನ ಗಣೇಶ ವಿಗ್ರಹದ ಫೋಟೋವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಬಹುದಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ, ಸೇರಿದಂತೆ ಪೊಲೀಸ್ ಇಲಾಖೆಯ ಇತರೆ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply