Belagavi

ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರ ದುರ್ಮರಣ


ಬೆಳಗಾವಿ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಬೆಳಗಾವಿ ನಗರದ ಚವ್ಹಾಟ್ ಗಲ್ಲಿಯ ಶ್ರೀನಾಥ ಚಿದಂಬರ ಚವ್ಹಾಣ (21), ರಚಿತ ರಂಜನ್ ಡುಮಾವತ್ (21) ಮೃತ ಯುವಕರು.
ಇಬ್ಬರೂ ಯುವಕರು ಬೆಳಗಾವಿ ಲಿಂಗಾರಾಜ ಕಾಲೇಜಿನ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು. ನಿನ್ನೆ ರಾತ್ರಿ ಊಟಕ್ಕೆಂದು ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬದಿಯ ಧಾಬಾವೊಂದರಲ್ಲಿ ಊಟ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply