Belagavi

ಬೆಳಗಾವಿ ಅಭಿವೃದ್ಧಿಗಾಗಿ ಪಾಲಿಕೆ ಸದಸ್ಯರೊಂದಿಗೆ ಶಾಸಕರು,ಸಂಸದರ ಸಂವಾದ


ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಇಂದು ಬೆಳಗಾವಿಯಲ್ಲಿ ಬಿಜೆಪಿಯ ಸಂಸದರು ಹಾಗೂ ಶಾಸಕರು ನೂತನ ಪಾಲಿಕೆ ಸದಸ್ಯರೊಂದಿಗೆ ಮಿಲ್ಲೇನಿಯಂ ಗಾರ್ಡನಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಾಲಿಕೆ ಚುಕ್ಕಾಣಿ ಹಿಡಿಯುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಬಿಜೆಪಿಯ ಸಂಸದ ಹಾಗೂ ಶಾಸಕರು ನೂತನ ಪಾಲಿಕೆ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಸಂವಾದದಲ್ಲಿ ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಉತ್ತರ ಶಾಸಕ ಅನೀಲ ಬೆನಕೆ ನೂತನವಾಗಿ ಆಯ್ಕೆಯಾದ 35 ಜನ ಪಾಲಿಕೆ ಸದಸ್ಯೆರೊಂದಿಗೆ ಹಾಗೂ 27 ವಿವಿಧ ಸಂಘ-ಸಂಸ್ಥೆಗಳ ಜೊತೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ನಗರದ ವಿವಿಧ ಸಂಘ ಸಂಸ್ಥೆಗಳ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅಭಿವೃದ್ಧಿ ಗೆ ಪಾಲಿಕೆ ಸದಸ್ಯರ ಜವಾಬ್ದಾರಿಗಳೇನು ಎಂಬುದರ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಶಾಸಕ ಅಭಯ ಪಾಟೀಲ ಪಾಲಿಕೆ ವ್ಯಾಪ್ತಿಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಲಾಗಿದ್ದು, ಅವುಗಳಿಗೆ ಅಗತ್ಯ ಅನುದಾನ ಒದಗಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.
ಉತ್ತರ ಶಾಸಕ ಅನೀಲ ಬೆನಕೆ ಮಾತನಾಡಿ, ಅಭಯ ಪಾಟೀಲ್ ಅವರ ಶ್ರಮದಿಂದ ಪಕ್ಷಕ್ಕೆ ಬೆಳಗಾವಿಯಲ್ಲಿ ಐತಿಹಾಸಿಕ ಗೆಲುವು ಪಕ ತಂದುಕೊಟ್ಟಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ರಾಜ್ಯ ಸರಕಾರ ಈ ಕುರಿತು ಚಿಂತಿಸಬೇಕಿದೆ ಎಂದು ಹೇಳಿದರು.


Leave a Reply