Belagavi

ಕೃಷಿ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ


ಬೆಳಗಾವಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳು ಭಾರತ ಬಂದಗೆ ಕರೆ ನೀಡಿದ್ದು ಬೆಳಗಾವಿಯಲ್ಲಿಯೂ ಪ್ರತಿಭಟನೆಯ ಬಿಸಿ ತಟ್ಟಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ಹೆದ್ದಾರಿ ಬಂದ್ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ‌

ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು  ಕೊರಳಿಗೆ, ಕೈಗಳಿಗೆ ಹಸಿರು ಶಾಲು ಕಟ್ಟಿಕೊಂಡು ರೋಡ್ ಮೇಲೆ ಮಲಗಿ ಪ್ರತಿಭಟನೆ ನಡೆಸಿದ್ದು ವಾಹನ ಸವಾರರಿಗೆ ತೊಂದರೆ ನೀಡಿದ್ದಾರೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್‌ಗೇಟ್ ಎದುರು ಕಾಂಗ್ರೆಸ್ ಕಾರ್ಯಕರ್ತೆ ಆಯೀಶಾ ಸನದಿಯಿಂದ ಹೌಡ್ರಾಮಾ ಸೃಷ್ಟಿ ಆಗಿದ್ದು, ಕೃಷಿ ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿದೆ ಎಂದು ಬೊಬ್ಬೆ ಹೊಡೆದುಕೊಂಡು ಆಕ್ರೋಶ ಹೊರ ಹಾಕಿದ್ದಾರೆ.

ಕೊರಳಿಗೆ ಹಾಕಿದ ಹಸಿರು ಶಾಲುಗಳನ್ನು ಎರಡು ಕಡೆಯಿಂದ ಹಿಡಿದ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರ‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ‌


Leave a Reply