Belagavi

ಶಿಕ್ಷಕರು ನಮ್ಮ ಸಮಾಜದ ಬೆನ್ನೆಲುಬು ; ಜಿಲ್ಲಾಧಿಕಾರಿ ಹಿರೇಮಠ


ಬೆಳಗಾವಿ: ಶಿಕ್ಷಕರು ನಮ್ಮ ಸಮಾಜದ ಬೆನ್ನೆಲುಬು. ಜಿಲ್ಲಾಡಳಿತದ ಬಹಳಷ್ಟು ಕೆಲಸಗಳಲ್ಲಿ ನಾವು ಶಿಕ್ಷಕರನ್ನು ಬಳಸಿಕೊಳ್ಳುತ್ತೇವೆ. ಚುನಾವಣೆ, ವ್ಯಾಕ್ಸಿನೇಶನ್, ಕೋವಿಡ್ ಅಂಕಿ ಸಂಖ್ಯೆ ಸೇರಿ ಪ್ರತಿಯೊಂದು ಕಾರ್ಯಗಳಲ್ಲಿಯೂ ಮುತುವರ್ಜಿಸಿ ವಹಿಸಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಶಿಕ್ಷಕರ ಕಾರ್ಯವನ್ನು ಶ್ಲಾಘಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ಬೆಳಗಾವಿ ಜಿಲ್ಲಾ ಘಟಕದ ಸಹಯೋಗದೊಂದಿಗೆ ಬೆಳಗಾವಿಯ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಭೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಕರನ್ನು ನಾನು ವಿದ್ಯಾರ್ಥಿ ಜೀವನದಿಂದ ಬಹಳ ಪ್ರೀತಿಸುತ್ತೇನೆ. ನಾನು ಕೂಡ ನನ್ನ ವೃತ್ತಿಯನ್ನು ಶಿಕ್ಷಕನಾಗಿಯೇ ಆರಂಭಿಸಿದ್ದೇನೆ. ನಾಲ್ಕು ವರ್ಷ ಪ್ರಾಧ್ಯಾಪಕನಾಗಿ ಹುಬ್ಬಳ್ಳಿ, ಹಾವೇರಿ ಮತ್ತು ಬೆಳಗಾವಿಯಲ್ಲಿ ಕೆಲಸ ಮಾಡಿದ್ದೇನೆ. ನಾನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ನನಗೆ ಕಲಿಸಿದ ಗುರುಗಳು ನನಗೆ ಭೇಟಿಯಾಗಲು ಬರುತ್ತೇನೆ ಎಂದು ಹೇಳಿದ್ದರು. ಆಗ ನಾನು ನೀವು ಬರಬೇಡಿ ಎಂದು ಹೇಳಿ ನಾನೇ ಅವರನ್ನು ಮನೆಗೆ ಕರೆಸಿ ಸತ್ಕರಿಸಿ ಗೌರವಿಸಿದೆ ಎಂದರು ಹೇಳಿದರು.

ಇನ್ನು ನಮ್ಮ ಸಮಾಜದ ಏಳಿಗೆ ಹಾಗೂ ಮಕ್ಕಳ ಭವಿಷ್ಯ ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ಪ್ರೇರಣೆ ಮಾಡುವುದರಿಂದಲೇ ನಾವು ಈ ಸ್ಥಾನಕ್ಕೆ ಬರಲು ಸಾಧ್ಯವಾಗಿದೆ. ನಾನು ಇಂದಿಗೂ ಕೂಡ ಅದನ್ನು ಸ್ಮರಿಸಿಕೊಳ್ಳುತ್ತೇನೆ ಎಂದರು. ಈ ವೇಳೆ ಮಾತನಾಡಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಶಿಕ್ಷಕರ ಸಮಸ್ಯೆಗಳನ್ನು ಸವಿಸ್ತಾರತವಾಗಿ ಚರ್ಚಿಸಲು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಕರೆದಿದ್ದೇವೆ. ವರ್ಗಾವಣೆ, ಸಿ ಆಂಡ್ ಆರ್ ತಿದ್ದುಪಡಿ, ಮುಖ್ಯೋಪಾಧ್ಯಾಯರ ಕೊರತೆ, ಎಂಪಿಎಸ್ ಸೇರಿ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ. ಮುಂದಿನ ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸುತ್ತೇವೆ. ಸಭೆಯಲ್ಲಿ 35 ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು, ಬೆಳಗಾವಿ ಜಿಲ್ಲೆಯ ಎಲ್ಲ ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದಾರೆ ಎಂದು ಹೆಚ್ಚಿನ ಮಾಹಿತಿ ನೀಡಿದರು.

ಇನ್ನು ಸಭೆಯಲ್ಲಿ 35 ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು, ಬೆಳಗಾವಿ ಜಿಲ್ಲೆಯ ಎಲ್ಲ ಕಾರ್ಯಕಾರಿಣಿ ಸದಸ್ಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ವೇಳೆ ಎನ್ ಪಿಸಿ ಸಂಘ ಬೆಳಗಾವಿ ವತಿಯಿಂದ ಎನ್ ಪಿಸಿ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ ಬಗ್ಗೆ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಸವರಾಜ್ ಗುರಕಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಪ್ರಧಾನ ಕಾರ್ಯದರ್ಶಿ ಜಗದೀಶಗೌಡ ಪಾಟೀಲ್, ಡಿಡಿಪಿಐ ಎ.ಬಿ.ಪುಂಡಲೀಕ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಿ, ಬೆಳಗಾವಿ ಜಿಲ್ಲಾಧ್ಯಕ್ಷ ಜಯಕುಮಾರ್ ಹೆಬಳಿ, ಜಿಲ್ಲಾ ಖಜಾಂಚಿ ವಾಯ್.ಬಿ.ಪೂಜೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಗೋಣಿ, ಜಿಲ್ಲಾ ಸಹ ಕಾರ್ಯದರ್ಶಿ ಕೆ.ಎಸ್.ರಾಚನ್ನವರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಬೆಳಗಾವಿ ನಗರ ಘಟಕದ ನಿರ್ದೇಶಕ ರಾಜು ಕೋಲಕಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Leave a Reply