Belagavi

ವಿಧಾನಪರಿಷತ್ ಚುನಾವಣೆ ಸ್ಪರ್ಧೆಗೆ ಸಿದ್ಧ ಮಾಜಿ ಸಂಸದ ಪ್ರಕಾಶ ಹುಕ್ಕೇರಿ


ಚಿಕ್ಕೋಡಿ: ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ತಿಳಿಸಿದರು.

ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಕಳೆದ 35 ವರ್ಷಗಳಿಂದ ಜನಪ್ರತಿನಿಧಿಯಾಗಿ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕನು ಕೂಡ ವಾಗಿದ್ದೇನೆ. ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರಾದಂತಹ ಸೇರಿದಂತೆ ಕಾಂಗ್ರೆಸ್ ಮುಖಂಡರು ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನು ನೀಡಬೇಕು ಹಾಗೂ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನರು ನನ್ನ ಬಳಿ ಕೇಳಿಕೊಳ್ಳುತ್ತಿದ್ದಾರೆ
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನು ನೀಡಬೇಕೆಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ತಿಳಿಸಿದರು.


Leave a Reply