Belagavi

ನಗರದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವಾರ್ಪಣೆ


ವಿಜಯಪುರ : ಅಕ್ಟೋಬರ್ : ೨ : ಗಾಂಧಿ ಜಯಂತಿ ದಿನದ ಅಂಗವಾಗಿ ಇಂದು ನಗರದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ಪಿ .ಸುನೀಲಕುಮಾರ,ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ್ ರೆಡ್ಡಿ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆನಂದಕುಮಾರ,ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಎಸಿ ಬಲರಾಮ ಲಮಾಣಿ ,ಶ್ರೀ ಪಾಟೀಲ ಹಾಗೂ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು.
ಇದೇ ಸಂದರ್ಭದಲ್ಲಿ ನಗರದ ಸ್ವಚ್ಛತೆಯಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಸನ್ಮಾನಿಸಿ,ಪ್ರಮಾಣ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೋವಿಂದರೆಡ್ಡಿ , ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಮಹಾನಗರಪಾಲಿಕೆ ಆಯುಕ್ತ ವಿಜಯ ಮಕ್ಕಳಿಕಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply