Belagavi

ಬಡಾಲ ಅಂಕಲಗಿಯ ದುರ್ಘಟನೆಗೆ ಸಚಿವ ಕಾರಜೋಳ ದಿಗ್ಭ್ರಮೆ ; ನಾಳೆ ಖುದ್ದು ಭೇಟಿ ನೀಡಲಿರುವ ಉಸ್ತುವಾರಿ ಸಚಿವ


ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಭಾರಿ ಮಳೆಯಿಂದ ಮನೆ ಕುಸಿದು ಏಳು ಜನ ಮೃತಪಟ್ಟಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು ಅವಶೇಷಗಳಡಿ ಸಿಲುಕಿಕೊಂಡಿರುವವರನ್ನು ರಕ್ಷಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿರುವ ಸಚಿವ ಕಾರಜೋಳ ಅವರು, ನಾಳೆ ಬಡಾಲ ಅಂಕಲಗಿ ಗ್ರಾಮಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆಯನ್ನು ವೀಕ್ಷಿಸಿ, ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲಿದ್ದಾರೆ.


Leave a Reply