Belagavi

ಯುವಕನನ್ನು ಕೊಲೆಗೈದ ಆರೋಪ ಹತ್ತು ಜನರ ಬಂಧನ


ಬೆಳಗಾವಿ: ಖಾನಾಪುರ ಬಳಿ ರೇಲ್ವೆ ಹಳಿ ಮೇಲೆ ಅರ್ಬಾಜ್ ಮುಲ್ಲಾ  ಎಂಬ ಯುವಕನನ್ನು ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆಗೈದ  ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ, ತಾಯಿ ಸೇರಿ ಒಟ್ಟು 10 ಆರೋಪಿಗಳ ಬಂಧನ ಮಾಡಲಾಗಿದೆ.

ಯುವತಿ ತಂದೆ ಈರಪ್ಪ ಕಂಬಾರ, ತಾಯಿ ಸುಶೀಲಾ ಕಂಬಾರ, ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ನಾಗಪ್ಪ ಮುತಗೇಕರ್, ಕುತಬುದ್ದೀನ್ ಬೇಪಾರಿ, ಪ್ರಲ್ಹಾದ್ ಸುಗತೆ, ಮಂಜುನಾಥ ಗೋಂದಳಿ, ಗಣಪತಿ ಸುಗತೆ,‌ಪ್ರಶಾಂತ ಪಾಟೀಲ್, ಪ್ರವೀಣ್ ಪೂಜೇರಿ, ಶ್ರೀಧರ್ ಡೋಣಿ ಸೇರಿ ಒಟ್ಟು 10 ಆರೋಪಿಗಳ ಬಂಧಿತ ಆರೋಪಿಗಳು.

ಸೆಪ್ಟೆಂಬರ್ 28ರಂದು ರೇಲ್ವೆ ಹಳಿ ಮೇಲೆ ಖಾನಾಪುರ ಬಳಿ ರೇಲ್ವೆ ಹಳಿ ಮೇಲೆ ಅರ್ಬಾಜ್ ಮುಲ್ಲಾ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ರೈಲ್ವೆ ಪೊಲೀಸ್ ರಿಂದ ಬೆಳಗಾವಿ ಪೊಲೀಸರಿಗೆ ವರ್ಗಾವಣೆಯಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಕೊಲೆ ಗೈದ ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Leave a Reply