Koppal

ಹಿರೇಮನ್ನಾಪೂರ ಗ್ರಾಮದಲ್ಲಿ ರೇಣುಕಾಚಾರ್ಯ ಜಂಗಮ ಸಮಾಜ ಸೇವಾ ಸಂಘ ಉದ್ಘಾಟನೆ


 

ಕುಷ್ಟಗಿ: ತಾಲೂಕಿನ   ಹಿರೇಮನ್ನಾಪುರ ಗ್ರಾಮದಲ್ಲಿ ಶ್ರೀ ರೇಣುಕಾಚಾರ್ಯ ಜಂಗಮ ಸಮಾಜ ಸೇವಾ ಸಂಘದ ಉದ್ಘಾಟನೆ ನಿಮಿತ್ತ ಅಕ್ಟೋಬರ್ 10ರಂದು ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ, ಶ್ರೀ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಧರ್ಮಸಭೆಯಲ್ಲಿ ಕುಷ್ಟಗಿಯ ಶ್ರೀ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ಚಳಗೇರಿಯ ಶ್ರೀ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ನಿಡಶೇಸಿಯ ಶ್ರೀ ಚನ್ನಬಸವ ಶಿವಾಚಾರ್ಯ ಸ್ವಾಮೀಜಿ ಹಾಗೂ ಎಂ. ಗುಡದೂರಿನ ಶ್ರೀ ನೀಲಕಂಠ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಆರ್ ಶರಣಪ್ಪ ಗುಮಗೇರಾ.


Leave a Reply