Belagavi

ಭಾರತೀಯ ಜನತಾ ಪಾರ್ಟಿಯ ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ


ಬೆಳಗಾವಿ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು  ರಾಜ್ಯ ಸರ್ಕಾರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಮೆಚ್ಚಿದ ಜನತೆ, ಬರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವದು ನಿಶ್ಚಿತ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು

ನಗರದ ಖಾಸಗಿ ಹೋಟೆಲೂಂದರಲ್ಲಿ  ರವಿವಾರ ನಡೆದ ಭಾರತೀಯ ಜನತಾ ಪಾರ್ಟಿ ವಿಧಾನಪರಿಷತ್ ಸದಸ್ಯರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ಸಾಲಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದು ಅವರ ಬೆಂಬಲ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ.

ಪಕ್ಷದಲ್ಲಿ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುವ ನಿರ್ಧಾರ ಮಾಡಿದರೆ ಎರಡು ಸ್ಥಾನಗಳನ್ನು ಗೆಲ್ಲುವ ಸಂಪೂರ್ಣ ವಿಶ್ವಾಸ ಪಕ್ಷಕ್ಕಿದೆ ಈ ಬಗ್ಗೆ ಮುಂದಿನ ನಿರ್ಧಾರ ಬರುವವರಿಗೆ ಕಾಯ್ದೆ ಚುನಾವಣೆಗೆ ವ್ಯವಸ್ಥಿತ ಪೂರ್ವ ತಯಾರಿಯಲ್ಲಿ ಪಕ್ಷದ ನಾಯಕರು ಜನಪ್ರತಿನಿಧಿಗಳು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸಿದ್ಧತೆಯಲ್ಲಿ ಇರಬೇಕೆಂದರು.

ಅರಣ್ಯ ಸಚಿವ ಉಮೇಶ್ ಕತ್ತಿ ಮಾತನಾಡಿ ಪಕ್ಷ ನೀಡುವ ಸೂಚನೆಯಂತೆ ಅಭ್ಯರ್ಥಿಗಳು ಯಾರೇ ಆಗಲಿ ಅವರ ಪರವಾಗಿ ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಮತದ ಅಂತರದಿಂದ ಗೆಲುವು ಸಾಧಿಸುವಂತೆ ಕಾರ್ಯನಿರ್ವಹಿಸುತ್ತೇವೆ ಎಂದರು.

ಸಂಸದೆ ಮಂಗಲ ಅಂಗಡಿ ಮಾತನಾಡಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದ್ದು ಕಾರ್ಯಕರ್ತರು ಉತ್ಸಾಹದಿಂದ ಚುನಾವಣೆಯಲ್ಲಿ ಶ್ರಮವಹಿಸುತ್ತಿರುವದರಿಂದ  ಪ್ರತಿಯೊಂದು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.

ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ ಪ್ರಸ್ತಾವಿಕವಾಗಿ ಮಾತನಾಡಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ ಸದಸ್ಯರ ಚುನಾವಣೆಯಲ್ಲಿ ಪಕ್ಷದ ಮುಖಂಡರು ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು, ಪದಾಧಿಕಾರಿಗಳು ಕೈಗೊಳ್ಳಬೇಕಾದ ಚುನಾವಣಾ ಕಾರ್ಯಗಳ ಬಗ್ಗೆ ತಿಳಿಸಿದರು.

ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ,ವಿಧಾನ ಸಭೆಯ ಉಪ ಸಭಾಪತಿ ಆನಂದ ಮಾಮನಿ,ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ, ಶಾಸಕರಾದ ಅಭಯ್ ಪಾಟೀಲ್ ಮಹಾಂತೇಶ್ ದೊಡ್ಡಗೌಡರ, ಮಹದೇವಪ್ಪ ಯಾದವಾಡ, ಅನಿಲ್ ಬೆನಕೆ ದುರ್ಯೋಧನ ಐಹೊಳೆ, ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ, ಡಾ. ರಾಜೇಶ್ ನೇರ್ಲಿ, ಶಶಿಕಾಂತ ಪಾಟೀಲ, ರಾಜ್ಯ ವಕ್ತಾರ ನ್ಯಾಯವಾದಿ ಎಂಬಿ ಝೀರಲಿ ಮಾತನಾಡಿದರು.

ವೇದಿಕೆಯ ಮೇಲೆ  ರಾಜ್ಯದ ಪದಾಧಿಕಾರಿ ಉಜ್ವಲ ಬಡವನಾಚೆ, ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟ, ವಿಭಾಗದ ಸಹ ಪ್ರಭಾರಿ ಬಸವರಾಜ್ ಯಂಕಂಚಿ ಇದ್ದರು.  ಮೂರು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಶಶಿಕಾಂತ ನಾಯಕ, ಕಾಡಾ ಅಧ್ಯಕ್ಷ ಡಾ ವಿ ಆಯ್ ಪಾಟೀಲ್, ರಮೇಶ್ ದೆಶಪಾಂಡೆ,  ರಾಜೇಂದ್ರ ಹರಕುಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಪಾಟೀಲ್ ಖಜಾಂಚಿ ಮಲ್ಲಿಕಾರ್ಜುನ್ ಮಾದಮ್ಮನವರ,  ಮಹಾನಗರ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಸ್ವಾಗತಿಸಿದರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಮೋಹಿತೆ ನಿರೂಪಿಸಿದರು ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಅಪ್ಪಾಜಿಗೊಳ  ವಂದಿಸಿದರು.


Leave a Reply