Belagavi

ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನ


ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆ‌ ಹಾಗೂ ಗಿರಿಜನ ಉಪ ಯೋಜನೆಯಡಿ 2021-22 ನೇ ಸಾಲಿನಲ್ಲಿ ಹತ್ತು ತಿಂಗಳುಗಳ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿ/ಪಂಗಡಗಳ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಭಾಷೆಯ ಬಳಕೆಯಲ್ಲಿ ಪ್ರಬುದ್ಧತೆ ಇರುವರಿಗೆ ಆದ್ಯತೆ ನೀಡಲಾಗುತ್ತದೆ. ಈ ಮೊದಲು‌ ಅಪ್ರೆಂಟಿಸ್ ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ.

ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು‌ ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಅಪ್ರೆಂಟಿಸ್ ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ‌ ಮಾಡಲಾಗುವುದು.
ಡಿಸೆಂಬರ್ -2021 ರಿಂದ ಸೆಪ್ಟೆಂಬರ್-2022 ರವರೆಗೆ ಹತ್ತು ‌ತಿಂಗಳ ಅವಧಿಯ ಅವಧಿಯಲ್ಲಿ ಪ್ರತಿ ಮಾಹೆ ತಲಾ‌ 15 ಸಾವಿರ ರೂಪಾಯಿ ಸ್ಟೈಫಂಡ್ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು, ನಿಗದಿತ‌‌ ಅರ್ಜಿ ನಮೂನೆಗಳನ್ನು ‌”ಉಪ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆ ವಾರ್ತಾಭವನ, ನ್ಯಾಯಾಲಯ ಆವರಣ, ಬೆಳಗಾವಿ” ಇಲ್ಲಿ‌ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 28, 2021 ರ ಒಳಗಾಗಿ ಅದೇ ಕಚೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಳಗಾವಿ ಮೊಬೈಲ್- ಸಂಖ್ಯೆ: 9448589639 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Leave a Reply