Belagavi

ಅಕ್ಟೋಬರ್ ೨೪ ರಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವಾರ್ಷಿಕ ಸಭೆ


ಬೆಳಗಾವಿ, ಅ.೧೨ : ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ೨೦೨೦-೨೧ ನೇ ಸಾಲಿನ ವಾರ್ಷಿಕ ಸಭೆಯನ್ನು ಅಕ್ಟೋಬರ್ ೨೪ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಡೆಸಲಾಗುವುದು.
ಸದರಿ ಸಭೆಯನ್ನು ಕೋವಿಡ್- ೧೯ ರ ಹಿನ್ನೆಲೆಯಲ್ಲಿ ಒಕ್ಕೂಟದ ಆವರಣದಿಂದ ವರ್ಚುವಲ್ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ವಿವೇಕ ವಸಂತರಾವ ಪಾಟೀಲ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.
ಈಗಾಗಲೇ ಎಲ್ಲ ಸದಸ್ಯರಿಗೆ ಸಭೆಯ ನೋಟಿಸ್ ಕಳುಹಿಸಲಾಗಿದ್ದು, ಅದು ತಲುಪಿದೆ ಇದ್ದಲ್ಲಿ, ಇದೇ ನೋಟಿಸ್ ಎಂದು ಪರಿಗಣಿಸಿ ಸಭೆಯಲ್ಲಿ ಭಾಗವಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಶ್ರೀನಿವಾಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply