Belagavi

ಕಕ್ಕೇರಿ ಗ್ರಾಮದ ಶ್ರೀ ಬೀಷ್ಟಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ


ಬೆಳಗಾವಿ, ಅ.೧೨ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಗುರುವಾರ (ಅ.೧೪) ಬೆಳಿಗ್ಗೆ ೦೬ ಗಂಟೆಯಿAದ ಶುಕ್ರವಾರ (ಅ.೧೬)ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಆಯುಧ ಪೂಜೆ ಮತ್ತು ವಿಜಯದಶಮಿಯಂದು ಶ್ರೀ ಬೀಷ್ಟಾದೇವಿ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅಥವಾ ಗ್ರಾಮದ ವ್ಯಾಪ್ತಿಯಲ್ಲಿ ಭಕ್ತಾದಿಗಳು ಸಾರ್ವಜನಿಕರು ದೇವರ ಹೆಸರಿನಲ್ಲಿ ಪ್ರಾಣಿ / ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ.
ಸದರಿ ಆದೇಶ ಉಲ್ಲಂಘಿಸಿದ್ದಲ್ಲಿ ೧೯೭೩ ರ ಸಿ.ರ‍್ಪಿ.ಸಿ ೧೪೪ (೧) (೩) ರ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಆದೇಶದಲ್ಲಿ ತಿಳಿಸಿದ್ದಾರೆ.


Leave a Reply