Belagavi

ವಾಲ್ಮೀಕಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಗಣ್ಯರು


ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಕೆರೆ ವೃತ್ತದಲ್ಲಿ ಆಯೋಜಿಸಿದ್ದ ರಾಮಾಯಣ ಮಹಾಕಾವ್ಯದ ಕತೃ, ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತವಾಗಿ ಗಣ್ಯರು ಶ್ರೀ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪೊಲೀಸ್ ಕಮಿಷನರ್ ಕೆ. ತ್ಯಾಗರಾಜ್, ಎಸ್.ಪಿ. ಲಕ್ಷ್ಮಣ ನಿಂಬಾಳ್ಕರ್, ಡಿಎಸ್ಪಿ ವಿಕ್ರಮ್ ಅಮರೆ, ಉಮಾ ಸಾಲಿಗೌಡರ್ ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.


Leave a Reply