Belagavi

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಆಕ್ರಮಣ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ


 

ಬೆಳಗಾವಿ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ಆಕ್ರಮಣವನ್ನು ಖಂಡಿಸಿ ಶುಕ್ರವಾರ ಶುಕ್ರವಾರ ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನವರಾತ್ರಿ ಸಂದರ್ಭದಲ್ಲಿ ಬಾಂಗ್ಲಾದೇಶದ 30 ಜಿಲ್ಲೆಗಳಲ್ಲಿ 315 ದೇವಸ್ಥಾನಗಳ ಮೇಲೆ ಮುಸಲ್ಮಾನರು ಆಕ್ರಮಣ ಮಾಡಿದ್ದಾರೆ. 1500 ಹಿಂದೂಗಳ ಮನೆಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 23 ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. 17 ಹಿಂದೂಗಳು ಕಾಣೆಯಾಗಿದ್ದಾರೆ. 13 ಹಿಂದುಗಳ ಹತ್ಯೆ ನಡೆದಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮಾರುತಿ ಸುತಾರ್, ಸಂದೀಪ್ ಭಿಡೆ, ವೆಂಕಟೇಶ್ ಶಿಂಧೆ, ಸಚಿನ್ ನೇಸರಕರ್, ಸದಾನಂದ ಮಾಸೇಕರ್, ಅಕ್ಕಾತಾಯಿ ಸುತಾರ್, ಮಿಲನ್ ಪವಾರ್, ಪ್ರಕಾಶ ಪಾಟೀಲ್, ಜ್ಞಾನೇಶ್ವರ ಕುಂಬಾರ, ಅನಿಲ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.


Leave a Reply