vijayapur

ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ವಿಜಯಪುರ:ಅ.೨೯.: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜನಿಯರಿAಗ್ ಹಾಗೂ ಇತರೆ ಕೋರ್ಸ್ಗಳಿಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜನಿಯರಿAಗ್ ಹಾಗೂ ಇತರೆ ಕೋರ್ಸ್ಗಳಿಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಎಸ್‌ಎಮ್‌ಐಎಸ್ ತಂತ್ರಾAಶದಲ್ಲಿ, ಇಲಾಖೆಯ ವೆಬ್‌ಸೈಟ್ SW.ಏಂಖ.ಓIಅ.Iಓ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ವಿಜಯಪುರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅದರಂತೆ ೨೦೨೦-೨೧ ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ೨೦೨೧ ನೇ ಸಾಲಿನ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಬೇಕು. ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಕೇಂದ್ರ ಕಚೇರಿ(ಬೆಂಗಳೂರು) ದಿಂದ ಡಿ.ಬಿ.ಟಿ ಮೂಲಕ ಜಮೆ ಮಾಡಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply