Koppal

ಕೊಪ್ಪಳ ಜಿಲ್ಲಾ ಹಾಗೂ ತಾಲೂಕ ಕ್ರೀಡಾಂಗಣ ವೀಕ್ಷಣೆ ಮಾಡಿದ ಸಚಿವ-ಡಾ.ನಾರಾಯಣಗೌಡ


ಕೊಪ್ಪಳ:ಕರ್ನಾಟಕ ಸರ್ಕಾರದ ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ಇಂದು ಕೊಪ್ಪಳ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲಿಸಿದರು ಹಾಗೂ ಖೇಲೋ ಇಂಡಿಯಾ ಯೋಜನೆ ಅಡಿ ಜಿಲ್ಲಾ ಕ್ರೀಡಾಂಗಣದ ಒಳ ಕ್ರೀಡಾಂಗಣ ಕಾಮಗಾರಿ ವೀಕ್ಷಿಸಿ, ಕಾಮಗಾರಿಯನ್ನು ಗುಣಮಟ್ಟದಿಂದ ನಿಗದಿತ ಸಮಯಕ್ಕೆ ಪೂರ್ಣಗೊಳಿಸಿ, ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗಳ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್, ಸಂಸದ ಸಂಗಣ್ಣ ಕರಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ಅಧ್ಯಕ್ಷೆ ಸವಿತಾ ಶೆಟ್ಟಿ, ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಜಿಲ್ಲಾ ಕ್ರೀಡಾಧಿಕಾರಿ ಅಮೃತ ಅಷ್ಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply