Belagavi

ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಪುನೀತ್ ರಾಜಕುಮಾರ ಅಭಿಮಾನಿ


ಚಿಕ್ಕೋಡಿ: ಪುನೀತ್ ರಾಜಕುಮಾರ್ ಅಕಾಲಿಕ ಮರಣಕ್ಕೆ ಅಭಿಮಾನಿಗಳ ಬಳಗಕ್ಕೆ ಬರಸಿಡಿಲು ಬಡದಿದ್ದ ಪರಿಣಾಮವಾಗಿ ಅಥಣಿಯಲ್ಲಿ ಒರ್ವ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.

ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.


Leave a Reply