Koppal

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ


ಕೊಪ್ಪಳ:  ಕರ್ನಾಟಕ ಸರ್ಕಾರದ ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೇಷ್ಮೆ ಮತ್ತು ಯುವ ಸಬಲೀಕರಣ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ, ವಿಕಲಚೇತನರ ಮತ್ತು ಹಿರಿಯ ನಾಗರಿಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ,ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ಅಧ್ಯಕ್ಷೆ ಸವಿತಾ ಶೆಟ್ಟಿ, ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಗೋಪಾಲಕೃಷ್ಣ, ಉಪನಿರ್ದೇಶಕ ಜಿತೇಂದ್ರ ಶೆಟ್ಟಿ, ರೇಷ್ಮೆ ಇಲಾಖೆ ಆಯುಕ್ತ ಆರ್.ಎಸ್ ಪೆದ್ದಪ್ಪಯ್ಯ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜೀಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಜಿಲ್ಲಾ ರೇಷ್ಮೆ ಇಲಾಖೆ ಉಪನಿರ್ದೇಶಕ ಅಂಜನಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ರೇಷ್ಮೆ ವಿಸ್ತರಣಾಧಿಕಾರಿಗಳು ತಾಲ್ಲೂಕು ಕ್ರೀಡಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply