Belagavi

25 ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ


ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಹಿಂಡಲಗಾ ಗ್ರಾಮದ ಸಮರ್ಥ ಕಾಲೋನಿ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದ ವತಿಯಿಂದ 25 ಲಕ್ಷ ರೂ,ಗಳ ವೆಚ್ಚದಲ್ಲಿ ಇಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಉದ್ಯಾನವನವನ್ನು ಸ್ಥಳೀಯರ ಸಲಹೆಯಂತೆ ಅತ್ಯಂತ ಉತ್ತಮವಾಗಿ ಅಭಿವೃದ್ಧಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಲಕ್ಷ್ಮಿ ಹೆಬ್ಬಾಳಕರ್, ಸ್ಥಳೀಯರು ಅದರ ಸಮರ್ಪಕ ನಿರ್ವಹಣೆಯನ್ನು ಮಾಡಿಕೊಳ್ಳಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ದೇಸಾಯಿ, ಗ್ರಾಮ ಪಂಚಾಯತಿಯ ವಾರ್ಡಿನ ಸದಸ್ಯರಾದ ಅಶೋಕ ಕಾಂಬಳೆ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸ್ಥಳೀಯ‌‌ ನಿವಾಸಿಗಳು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಹಿರೇಮಠ, ಪರುಶರಾಮ ಕುಡಚಿಕರ್, ಪ್ರಕಾಶ ಬೆಳಗುಂದ್ಕರ್‌ ಮುಂತಾದವರು ಉಪಸ್ಥಿತರಿದ್ದರು


Leave a Reply