Belagavi

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ: ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಪರಿಶೀಲನೆ


 

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನವ ಹಿನ್ನೆಲೆ ಅಗತ್ಯವಾಗಿರುವ ಪೂರ್ವಭಾವಿ ಸಿದ್ದತೆಗಳ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಸೋಮವಾರ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪರಿಶೀಲನೆ ನಡೆಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನಡೆಸಲು ಸರ್ಕಾರ ಉದ್ದೇಶಿಸಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಪ್ರಥಮ ಬಾರಿಗೆ ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಅಗತ್ಯವಾಗಿರುವ ಪೂರ್ವಭಾವಿ ಸಿದ್ದತೆಗಳ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಶೀಲನೆ ನಡೆಸಿದರು.

ಈ ವೇಳೆ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಎಸ್ ಪಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Leave a Reply