Belagavi

ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆ ಇಂದು


ಮೂಡಲಗಿ: ತಾಲೂಕಿನ ಸುಣಧೋಳಿ ಕ್ರಾಸ್ ಹತ್ತಿರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಮಂಗಳವಾರ ನ.೯ರಂದು ಸುಣಧೋಳಿ ಜಡಿಸಿಧ್ಧೇಶ್ವರ ಮಠ ಶ್ರೀ ಅಭಿನವ ಶಿವಾನಂದ ಮಹಾಸ್ವಾಮಿಜಿಗಳ ಸಾನಿಧ್ಯದಲ್ಲಿ ಜರುಗಲಿದೆ
ಕಾರ್ಯಕ್ರಮದಲ್ಲಿ ಕೆಎಂಎಫ್ ಅಧ್ಯಕ್ಷರು ಹಾಗೂ ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ. ಜಾರಕಿಹೊಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಆಜೀತ ಮನ್ನಿಕೇರಿ, ಅಕ್ಷರ ದಾಸೋಹ ಅಧಿಕಾರಿ ಅಶೋಕ ಮಲಬನ್ನವರ, ಗಜಾನನ ಉತ್ಸವ ಕಮೀಟಿಯ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಊರ ಹಿರಿಯರು, ಮಕ್ಕಳ ಪಾಲಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ಪ್ರೇಮಿಗಳು ಮತ್ತಿತರು ಪಾಲ್ಗೊಳ್ಳುವರು.


Leave a Reply