Belagavi

ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ, ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ


ಬೆಳಗಾವಿ: ಜಿಲ್ಲೆಯಲ್ಲಿ 04 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಜರುಗಿಸಿಲು ದಿನಾಂಕ ನಿಗದಿಯಾಗಿದ್ದು ನವೆಂಬರ್ 9 ರಿಂದ ಡಿಸೆಂಬರ್ 16 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ನ.10) ಬುಧವಾರ ನಡೆದ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿಧಾನಪರಿಷತ್ ಚುನಾವಣೆಗೆ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದ್ದು ಚುನಾವಣಾ ಅಧಿಸೂಚನೆಯನ್ನು ನವೆಂಬರ್ 16ರಂದು ನಿಗದಿಪಡಿಸಲಾಗಿದ್ದು, ನವೆಂಬರ್ 23 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದು ತಿಳಿಸಿದರು.

ನವೆಂಬರ್ 24ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು ಹಾಗೂ ನವೆಂಬರ್ 26ರಂದು ಉಮೇದುವಾರಿಕೆ ಗಳನ್ನು ಹಿಂತೆಗೆದುಕೊಳ್ಳಲು ದಿನಾಂಕ ನಿಗದಿ ಮಾಡಲಾಗಿದೆ ಹಾಗೂ ಡಿಸೆಂಬರ್ 12 ರಂದು ಮತದಾನ ಜರುಗಲಿದ್ದು ಮುಂಜಾನೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಸಲಾಗುವುದು.

ಡಿಸೆಂಬರ್ 14 ರಂದು ಮತ ಎಣಿಕೆ ಮಾಡಲಾಗುವುದು ಎಂದು ಅವರು ಹೇಳಿದರು.

ನೀತಿ ಸಂಹಿತೆ ಜಾರಿ:

ನವೆಂಬರ್ 9 ರಿಂದ ಡಿಸೆಂಬರ್ 16 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದ್ದು ರಾಜ್ಯ ಹಾಗೂ ಕೇಂದ್ರ ಮಂತ್ರಿಗಳು ಮುಖ್ಯಮಂತ್ರಿಗಳು ಒಳಗೊಂಡಂತೆ ಅಧಿಕೃತವಾಗಿ ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಹಾಗೂ ಆಡಳಿತಾತ್ಮಕ ಅನುಮೋದನೆ ಆಗಿದ್ದಲ್ಲಿಯೂ ಸಹ ಪ್ರಾರಂಭಿಸದೇ ಇರುವ ಕಾಮಗಾರಿಗಳನ್ನು ಕೈಗೊಳ್ಳುವಂತಿಲ್ಲ ರಾಜ್ಯಸಭಾ ವಿಧಾನಪರಿಷತ್ ವಿಧಾನಸಭಾ ಸದಸ್ಯರ ಪ್ರಸ್ತಾಪಿತ ಕಾಮಗಾರಿಗಳು ಸಹ ನೀತಿ ಸಂಹಿತೆ ಅನ್ವಯವಾಗುತ್ತದೆ ಎಂದು ಅವರು ಹೇಳಿದರು.

ನಗರದ ಸ್ಥಳೀಯ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಕಾಮಗಾರಿಗಳು ಕಾಣಿಸುವಂತಿಲ್ಲ ಹಾಗೂ ಅಂತಿಮಗೊಳಿಸುವಂತೆ ಇಲ್ಲ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಕೆಲಸಗಳನ್ನು ಈ ಸಮಯದಲ್ಲಿ ಜರುಗಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸ್ಥಳೀಯ ಸಂಸ್ಥೆಗಳು ಯಾವುದೇ ಸದಸ್ಯರು ಮುಖ್ಯಮಂತ್ರಿಗಳು ರಾಜಕೀಯ ಪಕ್ಷ ಯಾವುದೇ ನಗರದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ಸಭೆಗಳನ್ನು ಏರ್ಪಡಿಸಿ ಬೇಕಾದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದರು.

ಮಾದರಿ ನೀತಿ ಸಾಹಿತ್ಯ ಜಿಲ್ಲೆಯಾದ್ಯಂತ ಜಾರಿಯಲ್ಲಿರುವುದರಿಂದ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆಯನ್ನು ಪಾಲಿಸಲು ಈ ಮೂಲಕ ಕೋರಲಾಗಿದೆ ಜಿಲ್ಲಾಧಿಕಾರಿಗಳು ಹೇಳಿದರು.

ಮಾದರಿ ನೀತಿ ಜಾರಿಯಲ್ಲಿರುವ ಸಮಯದಲ್ಲಿ ಯಾವುದೇ ನಗರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು ಸಭೆಯನ್ನು ತಿರುಗಿಸಬಾರದು ಹಾಗೂ ಯಾವುದೇ ಮತದಾರಿಗೆ ಪ್ರಭಾವವಿರುವ ಯೋಜನೆಗಳನ್ನು ಘೋಷಿಸಬಾರದು ಹಾಗೂ ಪ್ರಸ್ತುತ ಚುನಾವಣೆಗೆ ಜಿಲ್ಲಾಧಿಕಾರಿಗಳು ಬೆಳಗಾವಿ ಇವರು ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣೆಯ ಅಧಿಕಾರಿಗಳಾಗಿರುತ್ತಾರೆ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆ:

ನವೆಂಬರ್ 16 ರಿಂದ ನವೆಂಬರ್ 23 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಮುಂಜಾನೆ 11 ಗಂಟೆಯಿಂದ ಮಧ್ಯಾಹ್ನ 3:00 ಗಂಟೆ ಒಳಗಾಗಿ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಠೇವಣಿ ಮೊತ್ತ ನಿಗದಿ:
ನಾಮಪತ್ರ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 10000 ಹಾಗೂ ಮೀಸಲಾತಿ ಅಭ್ಯರ್ಥಿಗಳು ರೂಪಾಯಿ 5000 ಗಳನ್ನು ಠೇವಣಿ ಮೊತ್ತವನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ವಸತಿ ಗೃಹಗಳನ್ನು ಮಾದರಿ ನೀತಿ ಸಂಹಿತಿ ಅವಧಿಯಲ್ಲಿ ಜಿಲ್ಲಾಧಿಕಾರಿಗಳ ವರ್ಷಕ್ಕೆ ಪಡೆಯಲಾಗುವುದು ಚುನಾವಣೆಗೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಚಾಲ್ತಿಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಗಳು ಹಾಗೂ ರಾಜ್ಯಸಭಾ ಸದಸ್ಯರು ವಿಧಾನ ಪರಿಷತ್ ಸದಸ್ಯರು ಹಾಗೂ ಶಾಸಕರು ಮತದಾರರಿರುತ್ತಾರೆ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿಗಳು ಅಸ್ತಿತ್ವದಲ್ಲಿರುವುದಿಲ್ಲ ವಾದರಿಂದ ಅವರುಗಳು ಮತದಾರರ ಆಗಿರುವುದಿಲ್ಲ ಮತ್ತು ಮತದಾರರ ಪಟ್ಟಿಗಳನ್ನು ದಿನದೊಳಗಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಚುನಾವಣೆಯಲ್ಲಿ ಪ್ರತಿ ನಗರ-ಗ್ರಾಮೀಣ ಸಂಸ್ಥೆಗಳಿಗೆ ಒಂದರಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಹಾಗೂ ಪ್ರಸ್ತುತ ಚುನಾವಣೆ ಕುರಿತು ಮಾನ್ಯ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಕ್ರಮವಹಿಸಲಾಗುವುದು ಪ್ರಸ್ತುತ ಚುನಾವಣಾ ಮತಪತ್ರಗಳನ್ನು ಬಳಕೆ ಮಾಡಲಾಗುವುದು ಹಾಗೂ ಮತಪೆಟ್ಟಿಗೆಗಳನ್ನು ಬಳಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೋವಿಡ್ 19 ರ ಮಾರ್ಗಸೂಚಿ ಪಾಲನೆ:

ಭಾರತ ಚುನಾವಣಾ ಆಯೋಗದ ನಿರ್ದೇಶನ ಹಾಗೂ ಮಾರ್ಗಸೂಚಿ ಅನ್ವಯ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಿ ಕೊಳ್ಳಲಾಗುವುದು ಪ್ರಸ್ತುತ ಚುನಾವಣೆಯನ್ನು 19 ಸೋಂಕು ತಡೆಗಟ್ಟುವಿಕೆಯ ಒಂದಿಗೆ ಚುನಾವಣೆಯನ್ನು ಜರುಗಿಸಲಾಗುತ್ತಿದೆ ಮತದಾರರು ಹಾಗೂ ಅಭ್ಯರ್ಥಿಗಳು ಸಾಮಾಜಿಕ ಭದ್ರತೆ ಹಾಗೂ ಮತದಾನ ಕಡ್ಡಾಯವಾಗಿ ಧರಿಸಿ ದ್ವೈವಾರ್ಷಿಕ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಂಪೂರ್ಣ ಸಹಕಾರ ನೀಡಲು ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


Leave a Reply