Koppal

ಕೊಪ್ಪಳ ಹಾಗೂ ರಾಯಚೂರು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮುಖ್ಯ ಮಂತ್ರಿಗಳಿಗೆ ಸನ್ಮಾನ


ಬೆಂಗಳೂರು: ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು ಬಜೆಟ್ ನಲ್ಲಿ ಘೋಷಿಸಿದ್ದ ಕುರಿ ಮತ್ತು ಮೇಕೆಗಳ ಆಕಸ್ಮಿಕ ಮರಣಕ್ಕೆ ಪರಿಹಾರ ಧನ “ಅನುಗ್ರಹ” ಯೋಜನೆಯನ್ನು ಈಗಿನ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿಯವರು ಮುಂದುವರೆಸಿದ್ದಕ್ಕೆ ಕೊಪ್ಪಳ -ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಶ್ರೀ ಹಾಲಪ್ಪ ಆಚಾರರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಕಂಬಳಿ ಹೊದಿಸಿ ,ಪುಸ್ತಕ ನೀಡಿ ನಾಡಿನ ಸಮಸ್ತ ಕುರಿಗಾಹಿಗಳ ಪರವಾಗಿ ಸನ್ಮಾನಿಸಲಾಯಿತು . ಈ ಸಂಧರ್ಭದಲ್ಲಿ ಕೊಪ್ಪಳದ ಸಂಸದರಾದ ಶ್ರೀ ಕರಡಿ ಸಂಗಣ್ಣವರು , ಶಾಸಕರಾದ ಶ್ರೀ ಪರಣ್ಣ ಮನವಳ್ಳಿಯವರು, ಶ್ರೀ ಬಸವರಾಜ್ ದಡೆಸುಗೂರವರು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply