Belagavi

ಪಿಯುಸಿ ಬೋರ್ಡ್ ಪರೀಕ್ಷೆಯಾಗಿ ನಡೆಸುವ ಹಠಾತ್‌ ಹೇರಿಕೆ ಹಿಂಪಡೆಯಲು ಆಗ್ರಹ


ಬೆಳಗಾವಿ: ದ್ವಿತೀಯ ಪಿಯುಸಿ ಮದ್ಯ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆಯಾಗಿ ನಡೆಸುವ ಹಠಾತ್‌ ಹೇರಿಕೆ
ಹಿಂಪಡೆಯುವಂತೆ ಆಗ್ರಹಿಸಿ ಎಆಯ್ ಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಕಾಂತರ ಕರ್ನಾಟಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಪ್ರಸ್ತುತ ದ್ವಿತೀಯ ಪಿಯುಸಿ ಬ್ಯಾಚ್ ತಮ್ಮ ಮೊದಲ ಪಿಯು ಪರೀಕ್ಷೆಗಳನ್ನು
ಬರೆಯದೆ ಬಡ್ತಿ ಹೊಂದಿದ್ದಾರೆ. ಎರಡು ವರ್ಷಗಳು ಪರೀಕ್ಷೆಗಳನ್ನು ಬರೆಯಲು ಆಗದೆ, ಬರವಣಿಗೆ ಅಭ್ಯಾಸ ಇರದೆ
ಪ್ರಸ್ತುತ ಎರಡನೇ ಪಿಯುಸಿಗೆ ತೇರ್ಗಡೆ ಆಗಿದ್ದಾರೆ. ಏಪ್ರಿಲ್‌ಗೆ ಅಂತಿಮ ಪರೀಕ್ಷೆಗಳು ನಡೆಯುತ್ತವೆ ಎಂದು ಹೇಳಲಾಗಿದೆ. ಹೀಗಿರುವಾಗ, ರಾಜ್ಯ ಸರ್ಕಾರದ ಮದ್ಯ ವಾರ್ಷಿಕವು ಬೋರ್ಡ್ ಪರೀಕ್ಷೆ ನಡೆಯುತ್ತದೆ ಎಂಬ ಹಠಾತ್ ನಿರ್ಧಾರವು ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರಲ್ಲಿ ಅತೀವ ಆತಂಕ ಸೃಷ್ಟಿಸಿದೆ ಈ ಹಠಾತ್ ಹೇರಿಕೆಯು ಆತಂಕ, ದುಗುಡ ಹಾಗೂ ಖಿನ್ನತೆಯನ್ನು ಸೃಷ್ಟಿಸಿ, ಮಾನಸಿಕ ಒತ್ತಡವನ್ನು ಹೇರಿದೆ. ಆದ್ದರಿಂದ ಯಥಾಪ್ರಕಾರ ಪ್ರತಿ ವರ್ಷದಂತೆ ಅಂತಿಮ ಪರೀಕ್ಷೆಯನ್ನು ಮಾತ್ರ ಪಬ್ಲಿಕ್ ಪರೀಕ್ಷೆಯಾಗಿ ಮಾಡಿ, ಮದ್ಯ ವಾರ್ಷಿಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿ,
ವಿಕೇಂದ್ರೀಕೃತ ಪ್ರಕ್ರಿಯೆಯಲ್ಲಿ ನಡೆಸಬೇಕು ಎಂದು ಎಐಡಿಎಸ್‌ಓ ಕಾರ್ಯದರ್ಶಿ ರಾಜು ಗಾಣಿಗ ಆಗ್ರಹಿಸಿದ್ದಾರೆ.


Leave a Reply