Belagavi

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ 1 ಸ್ಥಾನವನ್ನು ಗೆದ್ದೆ ಗೆಲ್ಲುತ್ತೇವೆ : ಸತೀಶ್ ಜಾರಕಿಹೊಳಿ ವಿಶ್ವಾಸ


ಗೋಕಾಕ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದು ಸ್ಥಾನವನ್ನು ಗೆದ್ದೆ ಗೆಲ್ಲುತ್ತೇವೆ. ಗೆಲ್ಲುವಷ್ಟು ಮತದಾರರ ಸಂಖ್ಯೆ ನಮ್ಮಲ್ಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತ ಪಡಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ನಿನ್ನೆಯಿಂದಲೇ ಮುಖಂಡರು, ಶಾಸಕರು, ಮಾಜಿ ಶಾಸಕರನ್ನು ಭೇಟಿಯಾಗುತ್ತಿದ್ದೇವೆ. ಯಮಕನಮರಡಿ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳನ್ನು ಸಭೆ ನಡೆಸಲಾಗಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಚನ್ನರಾಜ್ ಹಟ್ಟಿಹೊಳಿ ಹೆಸರು ಅಂತಿಮವಾಗಿದೆ. ಅಧಿಕೃತವಾಗಿ ಹೆಸರನ್ನು ಪ್ರಕಟ ಮಾಡಬೇಕಾಗಿದೆ. ನಾವು ಸಹ ಅವರ ಹೆಸರನ್ನುಮಾತ್ರ ಹೇಳಿದ್ದೇವೆ. ಈಗಾಗಲೇ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಚುನಾವಣೆಗೆ ಅಭ್ಯರ್ಥಿ ಮುಖ್ಯವಾಗುತ್ತದೆ. ಯಾಕಂದ್ರೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ರೆ ಜನರ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗುತ್ತದೆ. ಚನ್ನರಾಜ್ ಯುವಕರಿದ್ದಾರೆ, ಒಳ್ಳೆಯ ಕೆಲಸ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು


Leave a Reply