Belagavi

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ


ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಕಾವು ಬೆಳಗಾವಿಯಲ್ಲಿ ರಂಗೇರಿದ್ದು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಖಾನಾಪೂರ ಶಾಸಕಿ ಅಂಜಲಿ ನಿಂಬಾಳಕರ್‌ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾಜಿ ಸಚಿವ ಎ.ಬಿ.ಪಾಟೀಲ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಾಥ್ ನೀಡಿದರು.


Leave a Reply