Koppal

ಮಳೆಯಿಂದ ಹಾನಿಗೊಳಗಾದ ರೈತರ ಹೊಲಗಳಿಗೆ ಬೇಟಿ ನೀಡಿದ ತಹಶೀಲ್ದಾರು ಹಾಗೂ ಕೃಷಿ ಅಧಿಕಾರಿಗಳು


ಕುಷ್ಟಗಿ: ನಿರಂತರ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕುಷ್ಟಗಿಯ ತಾವರಗೇರಾ ಹೋಬಳಿಯ ವಿವಿಧ ಗ್ರಾಮಗಳ ರೈತರ ಹೊಲಗಳಿಗೆ ಮಾನ್ಯ ತಹಶೀಲ್ದಾರರು ಕೃಷಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಳೆ ಹಾನಿ ಕುರಿತು ಪರಿಶೀಲಿಸಿದರು.ಈ ಸಂದರ್ಭದಲ್ಲಿ ರೈತರು ತಮ್ಮ ಬೆಳೆಯ ಹಾನಿ ಬಗ್ಗೆ ಮಾಹಿತಿ ನೀಡಿದರು ಹಾಗೂ ಮಳೆ ಹಾನಿಯಿಂದ ಬೆಳೆ ಹಾಳಾಗಿದ್ದಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿ ಕೊಡಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply