Belagavi

ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಕೆ


ಬೆಳಗಾವಿ – ಎಂ.ಎಲ್.ಸಿ ಚುನಾವಣೆ ಹಿನ್ನೆಲೆ ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಕೆ ಕಾವು ರಂಗೇರುತ್ತಿದ್ದು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮಹಾಂತೇಶ ಕವಟಗಿಮಠ ಅವರು ಜಿಲ್ಲೆಯ ನಾಯಕರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸುವುದರ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.

ಈ ವೇಳೆ ಮಾತನಾಡಿದ ರಮೇಶ ಜಾರಕಿಹೊಳಿ, ಇದೇ ತಿಂಗಳು 29ರಂದು ನವದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತೇನೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಅಭ್ಯರ್ಥಿಯ ಜೊತೆಗೆ ಯಾರನ್ನು ಬೆಂಬಲಿಸಬೇಕೆನ್ನುವುದನ್ನು ಮನವರಿಕೆ ಮಾಡಲಿದ್ದೇನೆ. ಅವರ ಒಪ್ಪಿಗೆ ಪಡೆದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು

ಈ ವೇಳೆ ಸಚಿವರಾದ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಮತ್ತು ಜಿಲ್ಲೆಯ ಸಂಸದರು, ಶಾಸಕರು ನಾಮಪತ್ರ ಸಲ್ಲಿಕೆವೇಳೆ ಬೆಂಬಲ ಸೂಚಿಸಿದರು.


Leave a Reply