vijayapur

೦೩-ಬಿಜಾಪುರ- ಬಾಗಲಕೋಟ ಸ್ಥಳಿಯ ಸಂಸ್ಥೆಗಳ ಚುನಾವಣೆ:ಅಂತಿಮ ಮತದಾರರ ಪಟ್ಟಿ ಪ್ರಕಟ


ವಿಜಯಪುರ:ನ:೨೩: ೦೩-ಬಿಜಾಪುರ-ಬಾಗಲಕೋಟ ಸ್ಥಳಿಯ ಸಂಸ್ಥೆಗಳ ಮತಕ್ಷೇತ್ರದ ಸ್ಥಳಿಯ ಸಂಸ್ಥೆಗಳಿAದ ಜರುಗಲಿರುವ ಚುನಾವಣೆ -೨೦೨೧ ಗೆ ಸಂಬAಧಿಸಿದAತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ವಿಜಯಪುರ ಸ್ಥಳಿಯ ಸಂಸ್ಥೆಗಳ ಚುನಾವಣಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ.
ಪ್ರಸ್ತುತ ಕರಡು ಮತದಾರರ ಪಟ್ಟಿಗೆ ಸಂಬAಧಿಸಿದAತೆ ಸ್ವೀಕೃತಗೊಂಡ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ ಇತ್ಯರ್ಥಪಡಿಸಿ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ ೨೨-೧೧-೨೧ರಂದು ಪ್ರಚುರಪಡಿಸಲಾಗಿರುತ್ತದೆ. ಸದರಿ ಅಂತಿಮ ಮತದಾರರ ಪಟ್ಟಿಯು ಸಂಬAಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳಿಯ ಸಂಸ್ಥೆಗಳು,ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ , ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳ ಕಾರ್ಯಾಲಯಗಳಲ್ಲಿ ,ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯಾಲಯಗಳಲ್ಲಿ, ಜಿಲ್ಲೆಯ ಎಲ್ಲ ತಹಸೀಲ್ದಾರರ ಕಾರ್ಯಾಲಯಗಳಲ್ಲಿ ಲಭ್ಯವಿರುತ್ತದೆ.
ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಕುರಿತಂತೆ ಈಗಾಗಲೇ ದಿನಾಂಕ ೧೨.೧೧.೨೦೨೧ ಕರಡು ಮತದಾರರ ಪ್ರಕಟಿಸಿ ದಿನಾಂಕ ೧೮.೧೧.೨೦೨೧ ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ ದಿನಾಂಕ ೧೮.೧೧.೨೦೨೧ ರವರೆಗೆ ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ ಇತ್ಯರ್ಥಪಡಿಸಿ ದಿನಾಂಕ ೨೨.೧೧.೨೦೨೧ ರಂದು ಅಂತಿಮ ಮತದಾರರ ಪಟ್ಟಿಯನ್ನು ಆಯಾ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಕಟಿಸಲಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply