Koppal

ಹಿರೇಮನ್ನಾಪುರ ಗ್ರಾಮದಲ್ಲಿ ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮ


ಕುಷ್ಟಗಿ: ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಅಸ್ಪೃಶ್ಯತೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಕುಷ್ಟಗಿ ಪ್ರೊಫೆಸರ್ ಬಿ ಕೃಷ್ಣಪ್ಪ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಾಂಸ್ಕೃತಿಕ ಸಂಸ್ಥೆ(ರಿ ) ಮದಲ ಗಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮವನ್ನು ಕುಷ್ಟಗಿ ಪಿಎಸ್ಐ ತಿಮ್ಮಣ್ಣನಾಯಕ ಉದ್ಘಾಟಿಸಿದರು.

ನಂತರ ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಅವರು ಹುಟ್ಟು ಖಚಿತವಾದರೆ ಸಾವು ಖಚಿತ, ಆದರೆ ನಮ್ಮಲ್ಲಿ ಜಾತಿ ಎಂಬ ಪಿಡುಗು ತೊಡಗಬೇಕಾಗಿದೆ ಜಾತೀಯತೆ ಮಾಡುವುದರಿಂದ ಕಾನೂನು ಉಲ್ಲಂಘನೆಯಾಗುತ್ತದೆ. ಒಂದು ವೇಳೆ ಯಾರಾದರೂ ಯಾವುದೇ ಊರಲ್ಲಿ ಇರಲಿ ಒಂದು ಜಾತಿಯಿಂದ ಇನ್ನೊಂದು ಜಾತಿಯ ಬಗ್ಗೆ ಮಾತನಾಡುವಾಗ ಅಥವಾ ಜಾತಿ ನಿಂದನೆ ಮಾಡುವುದಾಗಲಿ ಕಂಡುಬಂದರೆ ಅಂತವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು. ಆದ್ದರಿಂದ ದಯವಿಟ್ಟು ಅಸ್ಪೃಶ್ಯತೆಯನ್ನು ಹೋಗಲಾಡಿಸಬೇಕು. ಮನೆಯ ಹಿರಿಯರು ತಮ್ಮ ಮಕ್ಕಳಿಗೆ ಸಾರ್ವಜನಿಕವಾಗಿ ಜಾತಿನಿಂದನೆ ಬಗ್ಗೆ ಮಾತನಾಡಿದಂತೆ ತಿಳುವಳಿಕೆ ಹೇಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಗೀತ ಶಿಕ್ಷಕರಾದ ವೆಂಕಟೇಶ್ ಹೊಸಮನಿ ಅಸ್ಪೃಶ್ಯತೆ ಬಗ್ಗೆ ಉಪನ್ಯಾಸ ನಡೆಸಿಕೊಟ್ಟರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಾಲಚಂದ್ರ ತಳವಾರ್ ಕಾರ್ಯಕ್ರಮ ಕುರಿತು ಮಾತನಾಡಿದರು.

ಪ್ರೊಫೆಸರ್ ಬಿ ಕೃಷ್ಣಪ್ಪ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಾಂಸ್ಕೃತಿಕ ಸಂಸ್ಥೆಯ ಮದಲಗಟ್ಟಿ ಸಂಸ್ಥೆಯ ಅಧ್ಯಕ್ಷರಾದ ಮರಿಸ್ವಾಮಿ ಆರ್ ಕನಕಗಿರಿ ,ಹಾಗೂ ಕಲಾತಂಡದವರು ಅಸ್ಪೃಶ್ಯತೆ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ಗೀತೆಗಳನ್ನು ಹಾಡಿ ಜನರಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಹಿರೇಮನ್ನಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು,ಸರ್ವ ಸದಸ್ಯರು,ಪಿಡಿಓ ಹಾಗೂ ಶಾಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply