Belagavi

ಧರನಟ್ಟಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ


ಬೆಳಗಾವಿ: ಧರನಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ವದಗಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಂಚಾರಕ್ಕೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿ
ಭರಮು ಕುರಲಿ ನೇತೃತ್ವದಲ್ಲಿ ಸಾರಿಗೆ ಸಂಸ್ಥೆಯು ಬೆಳಗಾವಿ ವಿಭಾಗಿಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿದ್ದು ಧರನಟ್ಟಿ ಗ್ರಾಮಕ್ಕೆ ಬಸ್ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಇನ್ನು ಹಿರಿಯ ನಾಗರಿಕರು ಹಲವು ಕಾರಣಗಳಿಂದ ನಗರಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿದ್ದು ಬಸ್ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ ಆದ್ದರಿಂದ ಧರನಟ್ಟಿಗೆ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಕತಿ ಕಾಂಗ್ರೆಸ್ ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷ ಭರಮು ಕುರ್ಲಿ, ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಸದಸ್ಯ ಗೋಪಾಲ ದಳವಾಯಿ, ಬಸವರಾಜ ನಾಯಿಕ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Leave a Reply