Belagavi

ಬೆಳಗಾವಿಯಲ್ಲಿ ಮಹಾಪರಿನಿರ್ವಾಣ ದಿನ ಆಚರಣೆ


ಬೆಳಗಾವಿ: ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಧನರಾದ ದಿನವನ್ನು ಮಹಾಪರಿನಿರ್ವಾಣ ದಿನವನ್ನಾಗು ಆಚರಿಸಲಾಗುತ್ತಿದ್ದು ಬೆಳಗಾವಿಯ ಅಂಬೇಡ್ಕರ್ ಗಾರ್ಡನ್‍ನಲ್ಲಿಯೂ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಎಂಎಲ್‍ಸಿ ಚುನಾವಣೆ ಕಾಂಗ್ರೆಸ್ ಉಸ್ತುವಾರಿ ಎನ್.ಎ.ಹ್ಯಾರೀಸ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿ ಈ ದೇಶ ಇರೋವರೆಗೂ ಅಂಬೇಡ್ಕರ್ ಅವರನ್ನು ಮರೆಯಲು ಸಾಧ್ಯವಿಲ್ಲ. ಸಂವಿಧಾನದ ಮೂಲಕ ನ್ಯಾಯ, ಹಕ್ಕು, ಸಮಾನತೆ ಬಾಳ್ವೆಯನ್ನು ದೇಶದ ಜನತೆಗೆ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ಅದನ್ನು ನಾವು ಪ್ರತಿಯೊಬ್ಬ ಭಾರತೀಯರು ಬೆಳೆಸಿಕೊಂಡು ಹೋಗಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ  ಕಾಂಗ್ರೆಸ್ ಮುಖಂಡರಾದ ಮಲ್ಲೇಶ ಚೌಗುಲೆ, ಮಂಜು ಕಾಂಬಳೆ, ಜಯಶ್ರೀ ಮಾಳಗಿ, ತೌಸಿಫ್ ಮುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Leave a Reply