karanatakaKoppal

ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ವಾರ್ಷಿಕ ಸರ್ವಸಾಧಾರಣ ಸಭೆ


ಕುಷ್ಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಾ ಗ್ರಾಮದ ಕನ್ನಡ ಸಾಹಿತ್ಯ ಭವನದಲ್ಲಿ ರಾಜ್ಯಮಟ್ಟದ ಸರ್ವಸಾಧಾರಣ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ಶ್ರೀ ಷ.ಬ್ರ. 108 ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮದ್ದಾನಿ ಹಿರೇಮಠ ಕುಷ್ಟಗಿ .ಹಾಗೂ ಶ್ರೀ ಪರಮಪೂಜ್ಯ ಶ್ರೀ ವೀರಭದ್ರ ಮಹಾಸ್ವಾಮಿಗಳು ಸುಕ್ಷೇತ್ರ ಅಂಕಲಿಮಠ ರವರು ದಿವ್ಯ ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ.

ಕುಷ್ಟಗಿ ತಾಲೂಕಿನ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.ಹಾಗೂ
ವಿವಿಧ ಕ್ಷೇತ್ರದ ಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ
ಮಾಜಿ ಶಾಸಕರು ಹಾಗೂ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ದೊಡ್ಡನಗೌಡ ಎಚ್ ಪಾಟೀಲ್ ರವರು ಹಾಗೂ ಗಣ್ಯರು ಸೇರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ತಾಲೂಕ ಜನಪ್ರತಿನಿಧಿಗಳು ಅಧಿಕಾರಿಗಳು, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಹಾಗೂ ಜಿಲ್ಲೆಯ ಎಲ್ಲ ತಾಲೂಕ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಾ ತಿಳಿಸಿದ್ದಾರೆ.

 

 

ಶೇಖರ್ ಎಸ್ ಗೊರೇಬಾಳ

ಕುಷ್ಟಗಿ

 

 

 


Leave a Reply