Belagavi

ವಿಧಾನಪರಿಷತ್ ಚುನಾವಣೆ: ಪರವಾನಿಗೆ ಹೊಂದಿದ ಶಸ್ತಾöçಸ್ತöç ಒಪ್ಪಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಸೂಚನೆ


ಬೆಳಗಾವಿ, ಡಿ.೦೯ : ಬೆಳಗಾವಿ ಜಿಲ್ಲೆಯಲ್ಲಿ ದ್ವೆöÊವಾರ್ಷಿಕ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿದ ಶಸ್ತಾöçಸ್ತöçಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಜಮಾ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಆಯುಧ ಲೈಸೆನ್ಸುದಾರರು ಆಯುಧಗಳೊಂದಿಗೆ ಓಡಾಡುವುದರಿಂದ ಶಾಂತಿಭAಗ ಆಗಬಹುದು ಅಥವಾ ಲೈಸೆನ್ಸುದಾರರು ಆಯುಧಗಳು ದುರುಪಯೋಗವಾಗುವ ಸಾಧ್ಯತೆಗಳಿರುತ್ತವೆ. ಚುನಾವಣೆಯ ಸಮಯದಲ್ಲಿ ಶಾಂತಿ ಭಂಗವಾಗದAತೆ ನೋಡಿಕೊಳ್ಳುವುದು ಅವಶ್ಯ ವಿರುವುದರಿಂದ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.
ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವ ಗಾರ್ಡ್ ಗಳು, ಖಾಸಗಿ ಗನ್ ಮ್ಯಾನ್ ಗಳು, ಜಿಲ್ಲಾಮಟ್ಟದ ಸ್ಕಿöçÃನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದವರು ವಿನಾಯತಿ ಪಡೆಯಬಹುದಾಗಿದೆ.
ಲೈಸೆನ್ಸ್ ಹೊಂದಿರುವ ಆಯುಧಗಳನ್ನು ಠೇವಣಿ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯು ಮುಗಿದ ನಂತರ ಸಂಬAಧಿಸಿದವರಿಗೆ ಬಿಡುಗಡೆ ಮಾಡಲು ಕ್ರಮ ತೆಗೆದುಕೊಳ್ಳವಂತೆ ಬೆಳಗಾವಿ ಜಿಲ್ಲೆಯ ಆರಕ್ಷಕ ಅಧೀಕ್ಷಕರಿಗೆ ನಿರ್ದೇಶನ ನೀಡಲಾಗಿದೆ.
ಲೈಸೆನ್ಸ್ ದಾರರು ಒಂದು ವೇಳೆ ಶಸ್ತಾöçಸ್ತöç ಒಪ್ಪಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.


Leave a Reply